ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಎ.29: ಆದಿಉಡುಪಿ ಫ್ರೌಢಶಾಲೆಯಲ್ಲಿ ಕಾವಲು ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮೃತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ರಾಜೇಶ್ ಕುಂದರ್ ಎಂದು ತಿಳಿದು ಬಂದಿದೆ.
ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕೇಂದ್ರವಾಗಿದ್ದ ಆದಿಉಡುಪಿ ಶಾಲೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಕಾನ್ಸ್‌ಟೇಬಲ್ ರಾಜೇಶ್, ಶುಕ್ರವಾರ ಬೆಳಿಗ್ಗೆ ತಮ್ಮದೇ ಸರ್ವಿಸ್ ಬಂದೂಕಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಿಂಗಳ ಹಿಂದೆಯಷ್ಟೇ ಗಂಗೊಳ್ಳಿಯಲ್ಲಿ ಪೊಲೀಸ್ ಸಿಬ್ಬಂದಿಗಳ ನಡುವಿನ ಜಗಳದಲ್ಲಿ ಅಮಾನತುಗೊಂಡಿದ್ದ ರಾಜೇಶ್ ನಿನ್ನೆಯಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು ಎನ್ನಲಾಗಿದೆ. ಬಡಾಕೆರೆಯವರಾದ ರಾಜೇಶ್ ಅವರು ಪ್ರಸ್ತುತ ಕುಂದಾಪುರದಲ್ಲಿ ಕುಟುಂಬಿಕರೊಂದಿಗೆ ವಾಸಿಸುತ್ತಿದ್ದರು. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಉಡುಪಿ ವೃತ್ತನಿರೀಕ್ಷಕರ ನೇತೃತ್ವದಲ್ಲಿ ತನಿಕೆ ನಡೆಯುತ್ತಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ