ಕುಂದಾಪುರ: ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಮಹಾರುದ್ರಯಾಗಕ್ಕೆ ಚಾಲನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಮಹಾರುದ್ರಯಾಗವನ್ನು ಎ.29ರಿಂದ ಮೇ.2ರ ತನಕ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಸಂಜೆಯಿಂದ ವಿವಿಧ ಧಾರ್ಮಿಕ ಕಾರ್ಯಗಳಿಗೆ ಚಾಲನೆ ದೊರೆತಿದೆ.

Call us

Click Here

ಶುಕ್ರವಾರ ಸಂಜೆ 6ರಿಂದ ಮಂಟಪ ಸಂಸ್ಕಾರ, ರಾಠೋಘ್ನ ಹೋಮ, ವಾಸ್ತು ಪೂಜೆ ನಡೆಯಿತು. ಶನಿವಾರ ಬೆಳಿಗ್ಗೆ 7ಗಂಟೆಯಿಂದ ಗಣಪತಿ ಪೂಜೆ, ಪುಣ್ಯಾಹ ನಾಂದಿ, ಋತ್ವಿಕ್ಟರಣೆ, ರುದ್ರ ಕಲಶ ಸ್ಥಾಪನೆ, ಗಣಹೋಮ ರುದ್ರ ಪುರಶ್ಚರಣೆ ಪ್ರಾರಂಭ, ದೇವರಿಗೆ ಕಲಶಾಭಿಷೇಕ, ಮಹಾಮಂಗಳಾರತಿ ಅನ್ನಸಂತರ್ಪಣೆ ಜರುಗಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಾನಂದ ಚಾತ್ರ, ತಂತ್ರಿಗಳಾದ ಪ್ರಸನ್ನಕುಮಾರ್ ಐತಾಳ್, ಸ್ವಾಗತ ಸಮಿತಿ ಅಧ್ಯಕ್ಷ ಚಂದ್ರಶೇಖರ ಕಲ್ಪತರು, ಕಾರ್ಯದರ್ಶಿ ಸುಬ್ರಮಣ್ಯ ಹೊಳ್ಳ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಸತೀಶ್ ಶೆಟ್ಟಿ, ವಿಶ್ವನಾಥ ಪೂಜಾರಿ, ನಾಗರಾಜ ರಾಯಪ್ಪನಮಠ, ಜಯಾನಂದ ಖಾರ್ವಿ, ಸತೀಶ್, ವೀಣಾ ಎಚ್. ಸವಿತಾ ಜಗದೀಶ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Leave a Reply