ಸುರಭಿ ಜೈಸಿರಿ 2022 ಆಮಂತ್ರಣ ಪತ್ರಿಕೆ ಬಿಡುಗಡೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಆಧುನಿಕ ಬದುಕಿನ ಧಾವಂತಗಳ ನಡುವೆ ಪರಸ್ಪರ ಬೆರೆಯುವ, ಮಾತನಾಡುವ ಹಾಗೂ ಬದುಕಿನ ಪ್ರತಿಕ್ಷಣವನ್ನು ಅನುಭವಿಸುವ ಸಂದರ್ಭಗಳೇ ಮರೆಯಾಗುತ್ತಿರುವ ಹೊತ್ತಿನಲ್ಲಿ ಕಲೆ ಸಾಂಸ್ಕೃತಿಕ ಚಟುವಟಿಕೆಗಳು ಮತ್ತೆ ನಮ್ಮತನವನ್ನು ನೆನಪಿಸುವ ಕಾರ್ಯವನ್ನು ಮಾಡುತ್ತವೆ ಎಂದು ಶಿರೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ ಅವರು ಹೇಳಿದರು.

Call us

Click Here

ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಮೇ 07ರಿಂದ ಮೇ 10ರ ತನಕ ಜರುಗಲಿರುವ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರಾದ ನಾಗರಾಜ ಪಿ. ಯಡ್ತರೆ, ಉಪಾಧ್ಯಕ್ಷರಾದ ಅಬ್ದುಲ್ ರವೂಫ್, ನಿರ್ದೇಶಕರಾದ ಸುಧಾಕರ ಪಿ. ಬೈಂದೂರು, ಸಂಘಟನಾ ಕಾರ್ಯದರ್ಶಿ ಸುಬ್ರಹ್ಮಣ್ಯ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

Leave a Reply