Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯದಲ್ಲಿ 6.60 ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರಗೆ: ಅರಣ್ಯ ಸಚಿವ ಉಮೇಶ್ ಕತ್ತಿ
    ಉಡುಪಿ ಜಿಲ್ಲೆ

    ರಾಜ್ಯದಲ್ಲಿ 6.60 ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರಗೆ: ಅರಣ್ಯ ಸಚಿವ ಉಮೇಶ್ ಕತ್ತಿ

    Updated:09/05/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ,ಮೇ 7:
    ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿನ ರೈತರಿಗೆ, ಸಾರ್ವಜನಿಕರಿಗೆ ಮತ್ತು ಸರ್ಕಾರಕ್ಕೆ ವಿವಿಧ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀವ್ರ ತೊಡಕಾಗಿದ್ದ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಸರ್ಕಾರವು ಪ್ರಸ್ತುತ ಬಗೆಹರಿಸಿದ್ದು, 6.60 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರತುಪಡಿಸಿ, ಸರ್ಕಾರಿ ಆದೇಶ ಹೊರಡಿಸಿದೆ ಎಂದು ರಾಜ್ಯದ ಅರಣ್ಯ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಹೇಳಿದರು.

    Click Here

    Call us

    Click Here

    ಅವರು ಇಂದು ಬ್ರಹ್ಮಾವರದ ನೀಲಾವರದಲ್ಲಿ, ಅರಣ್ಯ ಇಲಾಖೆ ಹಾಗೂ ಶ್ರೀ ಪೇಜಾವರ ಮಠದ ಸಹಯೋಗದಲ್ಲಿ, ಉಡುಪಿ ಶ್ರೀ ಪೇಜಾವರ ಮಠದ ವಿಶ್ವೇಶ್ವತೀರ್ಥ ಶ್ರೀಪಾದರ ಗೌರವಾರ್ಥ ನಿರ್ಮಿಸಲಾಗುವ ಸ್ಮೃತಿವನ ನಿರ್ಮಾಣ ಕಾರ್ಯದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

    ರಾಜ್ಯದಲ್ಲಿ 1996 ರಲ್ಲಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ, ತಜ್ಞರ ಸಮಿತಿಯ ಮೂಲಕ 9,94,881.11 ಹೆಕ್ಟೇರ್ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ಎಂದು ಗುರುತಿಸಿದ್ದು, ಸದ್ರಿ ತಜ್ಞರ ವರದಿಯಲ್ಲಿ ಶಾಸನಬದ್ಧ ಅರಣ್ಯಗಳನ್ನು ಡೀಮ್ಡ್ ಅರಣ್ಯಗಳೆಂದು ತಪ್ಪಾಗಿ ವರ್ಗಿಕರಿಸಿರುವುದರಿಂದ ಮತ್ತು ಯಾವುದೇ ಪೂರ್ವ ನಿರ್ಧಾರಿತ ಮಾನದಂಢಗಳನ್ನು ಅಳವಡಿಸದೇ ಗುರುತಿಸುವುದರಿಂದ, ಈ ಪ್ರದೇಶಗಳನ್ನು ಮರು ಪರಿಶೀಲಿಸಲು ನಿರ್ಧರಿಸಿ, ಕಂದಾಯ ಮತ್ತು ಅರಣ್ಯಾಧಿಕಾರಿಗಳನ್ನು ಒಳಗೊಂಡ ಜಿಲ್ಲಾ, ವಿಬಾಗೀಯ ಮತ್ತು ರಾಜ್ಯಮಟ್ಟದ ಸಮಿತಿಗಳನ್ನು ರಚಿಸಲಾಗಿತ್ತು.

    ಈ ಸಮಿತಿಗಳ ತಜ್ಞರ ವರದಿಯು, ಈ ಹಿಂದೆ ಗುರುತಿಸಿರುವ 9,94,881.11 ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಪ್ರದೇಶದಲ್ಲಿ, ನಿರ್ದಿಷ್ಟಪಡಿಸಿರುವ ಮಾನದಂಡಗಳನ್ವಯ ಅರಣ್ಯ ಗುಣಲಕ್ಷಣಗಳನ್ನು ಹೊಂದಿಲ್ಲದ ಮತ್ತು 2 ಹೆಕ್ಟೇರ್ ಪ್ರದೇಶಗಳಿಗಿಂತ ಕಡಿಮೆ ಇರುವ ಪ್ರದೇಶಗಳನ್ನು, ಅಸ್ಥಿತ್ವದಲ್ಲಿರದ ಸರ್ವೇ ನಂಬರ್ಗಳು, ಮೀಸಲು ಅರಣ್ಯ ಪ್ರದೇಶ, ಕೆರೆ ತೀರ, ಸಾಂಸ್ಥಿಕ, ಶಾಲಾ ನೆಡುತೋಪು, ಸ್ಟಿçಪ್-ಕಾಲುವೆ ನೆಡುತೋಪು ಮತ್ತು ರಸ್ತೆ ಬದಿ ನೆಡುತೋಪು, ಪ್ರತಿ ಹೆಕ್ಟೇರಿಗೆ 50 ಕ್ಕಿಂತ ಕಡಿಮೆ ಮರಗಳಿರುವ, ಇತರೆ ವಿಭಾಗಗಳಿಗೆ/ಇಲಾಖೆಗಳಿಗೆ ವರ್ಗಾಯಿಸಲಾದ ಪ್ರದೇಶಗಳು, ವಿವಿಧ ಶಾಸನಬದ್ಧ ನಿಬಂಧನೆಗಳ ಪ್ರಕಾರ ಅರಣ್ಯ ಮತ್ತು ನಿರ್ದಿಷ್ಟಪಡಿಸಿದ ಕ್ಷೇತ್ರದ ಮಾನದಂಡಗಳಿಗೆ ಅನುಗುಣವಾಗಿರದ ಪ್ರದೇಶಗಳನ್ನು ಪ್ರತ್ಯೇಕಿಸಿ, 3,30,186.96 ಹೆಕ್ಟೇರ್ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ಎಂದು ಗುರುತಿಸಿ ವಿವರಗಳನ್ನು ಸಲ್ಲಿಸಿದ್ದು, ಅದರಂತೆ ಈ ಪ್ರದೇಶವನ್ನು ಸಂರಕ್ಷಿಸಿ, ಅಭಿವೃದ್ಧಿಗೊಳಿಸುವ ದೃಷ್ಠಿಯಿಂದ ಅಧಿಸೂಚನೆ ಹೊರಡಿಸಿದ್ದು, ಅದೇಶದ ಪ್ರತಿಯನ್ನು ಸಚಿವರು ಬಿಡುಗಡೆಗೊಳಿಸಿದರು.

    ಪ್ರಸ್ತುತ ಡೀಮ್ಡ್ ಅರಣ್ಯ ವ್ಯಾಪ್ತಿಯ 3.30 ಲಕ್ಷ ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆ ವತಿಯಿಂದ ಸಂರಕ್ಷಿಸಿ ಅಭಿವೃದ್ಧಿಗೊಳಿಸಲು ಸಚಿವ ಸಂಪುಟದ ಅನುಮೋದನೆಯೊಂದಿಗೆ ಸರ್ವೋಚ್ಛ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದು, ಡೀಮ್ಡ್ ಅರಣ್ಯ ವ್ಯಾಪ್ತಿಯಿಂದ ಹೊರತುಪಡಿಸಿರುವ ಪ್ರದೇಶವನ್ನು ಕಂದಾಯ ಇಲಾಖೆಗೆ ನೀಡಲಾಗುತ್ತಿದ್ದು, ಈ ಪ್ರದೇಶವನ್ನು ಸಾರ್ವಜನಿಕ ಉಪಯೋಗಕ್ಕೆ ಬಳಸಲಾಗುವುದು ಎಂದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.