ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಹೊಸಾಡು ಕಾರ್ಯಕ್ಷೇತ್ರದ ಹೊಸಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾಗಿರುವ ೨ ಲಕ್ಷ ರೂ. ಅನುದಾನದ ಡಿಡಿಯನ್ನು ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ ಪೈ ಅವರು ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಮಂಗಳವಾರ ಹಸ್ತಾಂತರಿಸಿದರು.
ಜನಜಾಗೃತಿ ವೇದಿಕೆ ಸದಸ್ಯ ರಮೇಶ ಆಚಾರ್ಯ, ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.