Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಶತಚಂಡಿಕಾಯಾಗದ ಪೂರ್ಣಾಹುತಿ, ಡಿ.ಕೆ. ಶಿವಕುಮಾರ್ ಭಾಗಿ
    ಊರ್ಮನೆ ಸಮಾಚಾರ

    ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಶತಚಂಡಿಕಾಯಾಗದ ಪೂರ್ಣಾಹುತಿ, ಡಿ.ಕೆ. ಶಿವಕುಮಾರ್ ಭಾಗಿ

    Updated:20/05/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು,ಮೇ.20:
    ತಾಲೂಕಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾಜಗೋಪುರ ಸಮರ್ಪಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಶತಚಂಡಿಕಾ ಯಾಗದ ಪೂರ್ಣಾಹುತಿ ಶುಕ್ರವಾರ ದೇವಳದ ಆವರಣದಲ್ಲಿ ಜರುಗಿತು.

    Click Here

    Call us

    Click Here

    ಪೂರ್ಣಾಹುತಿಯ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಿ ಎಲ್ಲರ ಕಷ್ಟಗಳನ್ನು ದೂರಮಾಡಿ ಸು:ಖ ಶಾಂತಿಯನ್ನು ನೀಡಲಿ. ಯು.ಬಿ. ಶೆಟ್ಟಿ ಅವರು ಯಾವುದೇ ಅಪೇಕ್ಷೆ ಇಲ್ಲದೇ ದೇವಿಯ ಸೇವೆಯನ್ನು ಮಾಡುತ್ತಿದ್ದಾರೆ. ಈ ಪವಿತ್ರ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವುದು ಸಂತೋಷ ತಂದಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲರಿಗೂ ದೇವಿ ಒಳ್ಳೆಯದನ್ನು ಮಾಡಲಿ ಎಂದರು.

    ಕಾರ್ಯಕ್ರಮಕ್ಕೆ ಆಗಮಿಸಿದ ಡಿ.ಕೆ ಶಿವಕುಮಾರ್ ಅವರನ್ನು ಯು.ಬಿ. ಶೆಟ್ಟಿ ದಂಪತಿಗಳು ಹಾಗೂ ದೇವಳದ ಅರ್ಚಕರು ಸನ್ಮಾನಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು.ಆರ್. ಸಭಾಪತಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉದ್ಯಮಿ ಸುರೇಂದ್ರ ಶೆಟ್ಟಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

    ಶತಚಂಡಿಕಾ ಯಾಗದ ಪೂರ್ಣಾಹುತಿ, ಶ್ರೀದೇವಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭ ಯು.ಬಿ.ಎಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಯು.ಬಿ. ಶೆಟ್ಟಿ, ರಂಜನಾ ಯು.ಬಿ. ಶೆಟ್ಟಿ, ಸಹೋದರಿಯರಾದ ಶುಭಶ್ರೀ ಶೆಟ್ಟಿ ಯಶಶ್ರೀ ಬಿ. ಶೆಟ್ಟಿ ದೇವಳದ ಅರ್ಚಕರು,ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    six + ten =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.