ಆರ್ಥಿಕ ವ್ಯವಹಾರದಲ್ಲಿ 9 ಕೋಟಿ ಮೋಸ: ಡೆತ್‌ನೋಟ್‌ನಲ್ಲಿ ಕಾರಣ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಕಟ್ಟೆ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) ಅವರು ಬರೆದಿಟ್ಟ ಡೆಟ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ಈರ್ವರ ಹೆಸರನ್ನು ಉಲ್ಲೇಖಿಸಲಾಗಿದೆ. ಕುಂದಾಪುರ ಪೊಲೀಸ್ ಎಸ್‌ಹೆಚ್‌ಓ ಅವರಿಗೆ ತಮ್ಮ ಕಚೇರಿಯ ಲೆಟರ್‌ಹೆಡ್‌ನಲ್ಲಿ ಡೆತ್‌ನೋಟ್ ಬರೆದಿದ್ದು ಹಣಕಾಸಿನ ವ್ಯವಹಾರದಲ್ಲಿ ತನಗೆ ಅನ್ಯಾಯವಾಗಿರುವ ಬಗ್ಗೆ ಬರೆದಿಟ್ಟಿದ್ದಾರೆ.

Call us

Click Here

ಗೋಪಾಲಕೃಷ್ಣ ರಾವ್ ಅವರು ಡೆತ್‌ನೋಟ್‌ನಲ್ಲಿ ಮೊಳಹಳ್ಳಿ ಗಣೇಶ್ ಶೆಟ್ಟಿ, ಇಸ್ಮಾಯಿಲ್ ಹಂಗಳೂರು ಹೆಸರು ಪ್ರಸ್ತಾಪ ಮಾಡಿದ್ದು, ಇವರಿಬ್ಬರೂ ಗೋಲ್ಡ್ ಜ್ಯುವೆಲ್ಲರಿ ಹೆಸರಿನಲ್ಲಿ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ 2012 ಫೆಬ್ರವರಿ 3ರಂದು 3 ಕೋಟಿ 34 ಲಕ್ಷ ನಗದು, 5 ಕೆ.ಜಿ ಚಿನ್ನ ಪಡೆದುಕೊಂಡಿದ್ದರು. ಆ ಬಳಿಕ ನಗ-ನಗದು, ಅದಕ್ಕೆ ಸಲ್ಲಬೇಕಾದ ಬಡ್ಡಿಯನ್ನೂ ವಾಪಾಸ್ ಮರಳಿಸಿರಲಿಲ್ಲ. ಈ ವಿಚಾರದಲ್ಲಿ ಹಲವು ಬಾರಿ ಜನಪ್ರತಿನಿಧಿಗಳ ನೇತೃತ್ವದಲ್ಲಿ ಪಂಚಾಯತಿ ಮಾಡಿದ್ದು, ವಾಯಿದೆ ಪಡೆದಿದ್ದರು. ಈವರೆಗೆ 9 ಕೋಟಿ ಮೊತ್ತದ ಹಣ, ಚಿನ್ನ ವಾಪಾಸ್ ನೀಡದೆ ಮೋಸ ಮಾಡಿದ್ದಾರೆ. ಗಣೇಶ್ ಶೆಟ್ಟಿ ಮೊಳಹಳ್ಳಿ ಮನೆಗೆ ತಿರುಗಿ ತಿರುಗಿ ಸಾಕಾಯ್ತು. ಅವರ ಮನೆಯಲ್ಲಿಯೇ ನನ್ನ ರಿವಾಲ್ವರ್ ಇಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಗಣೇಶ್ ಶೆಟ್ಟಿ ಮೊಳಹಳ್ಳಿ, ಇಸ್ಮಾಯಿಲ್ ಅವರಿಂದ ಹಣ ರಿಕವರಿ ಮಾಡಿ, ಆ ಹಣವನ್ನು ಮನೆಯವರಿಗೆ ಕೊಡಿಸಿ ಎಂದು ಬರೆದುಕೊಂಡಿದ್ದಾರೆ.

ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಕೆ ಮುಂದುವರಿಸಿದ್ದಾರೆ.

ಇದನ್ನೂ ಓದಿ ► ಕುಂದಾಪುರ: ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ – https://kundapraa.com/?p=59468 .

Leave a Reply