ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಕೋಡಿ ಕುಂದಾಪುರ ಇವರು ಪ್ರಾರಂಭಿಸಿದ ” ಸ್ವಚ್ಛ ಕಡಲ ತೀರ – ಹಸಿರು ಕೋಡಿ” ಅಭಿಯಾನ 2022 5ನೇ ಹಂತ ಕೋಡಿಯಲ್ಲಿ ದಿನಾಂಕ 29-05-2022 ರವಿವಾರ ನಡೆಯಿತು. ವಿದ್ಯಾರ್ಥಿಗಳು, ಶಿಕ್ಷಕರು ,ಆಡಳಿತ ಮಂಡಳಿಯ ಸದಸ್ಯರು, ರಕ್ಷಕ- ಶಿಕ್ಷಕ ಸಂಘದ ಸದಸ್ಯರು, ಪೋಷಕರು , ಪ್ರಾಕ್ತನ ವಿದ್ಯಾರ್ಥಿಗಳು, ಊರಿನ ಪ್ರಮುಖರು ಹಾಗೂ ಮಹಾಜನರು ಮತ್ತು ನಿಸರ್ಗ ಪ್ರಿಯರು ಈ ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಕೋಡಿಯ ಕಡಲ ತೀರವನ್ನು ಸ್ವಚ್ಛಗೊಳಿಸಿದರು.
ಈ ಕಾರ್ಯಕ್ಕೆ ಸಹಕಾರ ನೀಡುತ್ತಿರುವ ಕುಂದಾಪುರ ಪುರಸಭೆಯ ಚೀಫ್ ಆಫೀಸರ್ ಹಾಗೂ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ಸಿಬ್ಬಂದಿವರ್ಗದವರಿಗೆ ಬ್ಯಾರೀಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್ ರೆಹಮಾನ್ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.
ನಾವಿರುವ ಪ್ರದೇಶದ ಸ್ವಚ್ಛತೆಯನ್ನು ಕಾಪಾಡುವ ಜವಾಬ್ದಾರಿಯನ್ನು ತಿಳಿಸುವ ಕಾರ್ಯ ನಿರಂತರವಾಗಿ ಈ ಅಭಿಯಾನದ ಮೂಲಕ ನಡೆಯುತ್ತಿರುವದರ ಕುರಿತು ಹರ್ಷ ವ್ಯಕ್ತ ಪಡಿಸುತ್ತಾ ಇದರಲ್ಲಿ ಪಾಲ್ಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ , ಶಿಕ್ಷಕರಿಗೆ ಮತ್ತು ಎಲ್ಲಾ ಸಹೃದಯರಿಗೆ ಬ್ಯಾರೀಸ್ ವಿದ್ಯಾ ಸಂಸ್ಥೆಗಳ ಛೇರ್ಮನ್ ಸಯ್ಯದ್ ಮಹಮದ್ ಬ್ಯಾರಿಯವರು ಅಭಿನಂದನೆಗಳನ್ನು ಹೇಳಿದ್ದಾರೆ .