ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಉಪ್ಪಿನಕುದ್ರುವಿನ ಯುವತಿ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರಮುಖ ಆರೋಪಿ ಅಝೀಝ್ (32) ಹಾಗೂ ಆತನಿಗೆ ಸಹಕರಿಸಿದ ರಹೀಮ್ (34) ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮೃತ ಯುವತಿ ಶಿಲ್ಪಾ, ಅಜೀಜ್ ಎಂಬಾತನ ಜವಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಅಜೀಜ್ ಕೆಲಸದ ಆಕೆ ವೇಳೆ ಪುಸಲಾಯಿಸಿ ಸ್ನೇಹ ಬೆಳೆಸಿಕೊಂಡಿದ್ದಲ್ಲದೇ, ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿಕೊಂಡಿದ್ದ. ಬಳಿಕ ಮತಾಂತರವಾಗಿ ಮದುವೆ ಮಾಡುಕೊಳ್ಳುವಂತೆ ಶಿಲ್ಪಾಗೆ ಅಝೀಜ್ & ಆತನ ಹೆಂಡತಿ ಒತ್ತಾಯ ಮಾಡಿದ್ದು ಇದರಿಂದಲೇ ಶಿಲ್ಪಾ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗಿದೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಫಲಿಸದೆ ಶಿಲ್ಪಾ ಸಾವನ್ನಪ್ಪಿದ್ದಳು.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅಝೀಜ್ ಮತ್ತು ಆತನ ಪತ್ನಿ ಸಲ್ಮಾ ವಿರುದ್ದ ಆತ್ಮಹತ್ಯೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು. ಅದರಂತೆ ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದ ಅಝೀಜ್‌ನನ್ನು ಸೋಮವಾರ ಬೆಳಿಗ್ಗೆ ಹೆಮ್ಮಾಡಿಯಲ್ಲಿ ವಶಕ್ಕೆ ಪಡೆದುಕೊಂಡು ಬಳಿಕ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ಅಝೀಝ್ ಗೆ ಜೂ.6 ರವರೆಗೆ ಪೊಲೀಸ್ ಕಸ್ಟಡಿ ಹಾಗೂ ರಹೀಮ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
ಡಿವೈಎಸ್ಪಿ ಶ್ರೀಕಾಂತ ಕೆ., ಸರ್ಕಲ್ ಇನ್ಸಪೆಕ್ಟರ್ ಗೋಪಿಕೃಷ್ಣ, ಉಪ ನಿರೀಕ್ಷಕರಾದ ಶ್ರೀಧರ ನಾಯಕ್, ಸದಾಶಿವ ಗವರೋಜಿ ನೇತೃತ್ವದ ಪೊಲೀಸರ ತಂಡ ಆರೋಪಿಯ ಪತ್ತೆಗಾಗಿ ಬಲೆ ಬೀಸಿತ್ತು.
ಘಟನೆಗೆ ಸಂಬಂಧಿಸಿದಂತೆ ಇದೊಂದು ಲವ್ ಜಿಹಾದ್ ಕೃತ್ಯ ಎಂದು ಹಿಂದೂ ಸಂಘಟನೆಗಳ ಪ್ರಮುಖರು ಆರೋಪಿಸಿ ಠಾಣೆಯಲ್ಲಿ ದೂರು ನೀಡಿದ್ದರು. ಪ್ರತಿಭಟನೆ, ಖಂಡನೆ ನಡೆದಿತ್ತು.