ಗುಜ್ಜಾಡಿ ಸ.ಹಿ.ಪ್ರಾ ಶಾಲಾ ಶತಮಾನೋತ್ಸವ ಸಮಿತಿಯಿಂದ ಶಾಲಾ ವಾಹನ ಹಸ್ತಾಂತರ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಶತಮಾನೋತ್ಸವ ಸಮಿತಿ ವತಿಯಿಂದ ಶಾಲೆಗೆ ಶಾಲಾ ವಾಹನ ಹಸ್ತಾಂತರಿಸಲಾಗಿದ್ದು, ಈ ಮೂಲಕ ಎರಡು ಸ್ವಂತ ಶಾಲಾ ವಾಹನವನ್ನು ಹೊಂದಿರುವ ಬೈಂದೂರು ವಲಯದ ಪ್ರಥಪ್ರಥಮ ಶಾಲೆ ಎಂಬ ಹೆಗ್ಗಳಿಕೆಗೆ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾತ್ರವಾಗಿದೆ.

Call us

Click Here

ಶಾಲೆಯ ವಠಾರದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಾರಾಯಣ ಟಿ.ಪೂಜಾರಿ ಅವರು ಶತಮಾನೋತ್ಸವ ಸಮಿತಿ ವತಿಯಿಂದ ಶಾಲಾ ವಾಹನವನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ.ಗುಜ್ಜಾಡಿ ಮತ್ತು ಶಾಲೆಯ ಮುಖ್ಯ ಶಿಕ್ಷಕ ಆನಂದ ಜಿ. ಅವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.

ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಯಮುನಾ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್.ಮೇಸ್ತ, ಶಿವಮೊಗ್ಗದ ಉದ್ಯಮಿ ವಿನೋದ ಭಂಡಾರಿ, ಪ್ರಕಾಶ ಪೂಜಾರಿ, ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ರಾಜೀವ ಶ್ರೀಯಾನ್, ಗ್ರಾಪಂ ಉಪಾಧ್ಯಕ್ಷ ರಾಜು ಪೂಜಾರಿ, ಗ್ರಾಪಂ ಸದಸ್ಯರಾದ ಹರೀಶ ಮೇಸ್ತ, ತಮ್ಮಯ್ಯ ದೇವಾಡಿಗ, ಎಸ್‌ಡಿಎಂಸಿ ನಿಕಟಪೂರ್ವ ಅಧ್ಯಕ್ಷ ರಾಮನಾಥ ಚಿತ್ತಾಲ್, ದಾನಿ ದಯಾಕರ ಮೇಸ್ತ, ಶಿಕ್ಷಣ ಸಂಯೋಜಕ ಯೋಗೀಶ್, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ವಲಿವುಲ್ಲಾ ಅಬ್ದುಲ್ ರೆಹಮಾನ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಇಂದಿರಾ ಪೂಜಾರಿ, ನಿವೃತ್ತ ಮುಖ್ಯಶಿಕ್ಷಕ ಜಯರಾಮ ಶೆಟ್ಟಿ, ಸಹಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಸಹಶಿಕ್ಷಕ ವಿಶ್ವನಾಥ ಸ್ವಾಗತಿಸಿದರು. ಮುಖ್ಯಶಿಕ್ಷಕ ಆನಂದ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿಯರಾದ ಆಶಾ ಕಾರ್ಯಕ್ರಮ ನಿರ್ವಹಿಸಿದರು. ಸುಚೇತಾ ಎಸ್.ಮಿಜಾರ್ ವಂದಿಸಿದರು.

Leave a Reply