ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಪಡೆದ ನೇಹಾಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇತ್ತೀಚಿಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೬೨೩ ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಪಡೆದ ಗಂಗೊಳ್ಳಿ ಸ.ವಿ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ನೇಹಾ ಅವರನ್ನು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಬುಧವಾರ ಸನ್ಮಾನಿಸಿ ಗೌರವಿಸಲಾಯಿತು.

Call us

Click Here

ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಶಾಲೆಯ ಮುಖ್ಯೋಪಾಧ್ಯಾಯ ಜಿ.ವಿಶ್ವನಾಥ ಭಟ್ ಅವರು ನೇಹಾ ಅವರನ್ನು ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಮತ್ತು ಇಂದುಶ್ರೀ ಮಹಿಳಾ ಸಂಘದ ಪರವಾಗಿ ಸನ್ಮಾನಿಸಿ ಗೌರವಿಸಿದರು. ದೇವಸ್ಥಾನದ ಅಧ್ಯಕ್ಷ ಶಶಿಧರ ಜಿ.ಟಿ., ಮಹಿಳಾ ಸಂಘದ ಅಧ್ಯಕ್ಷೆ ನೇತ್ರಾವತಿ, ದೇವಸ್ಥಾನದ ಮೊಕ್ತೇಸರ ಸಂಜೀವ ಜಿ.ಟಿ., ಮರವಂತೆ ಶಾಲೆಯ ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ, ಗುಜ್ಜಾಡಿ ಶಾಲೆಯ ಶಿಕ್ಷಕಿ ಆಶಾ, ಮಹಿಳಾ ಸಂಘದ ಜಯಂತಿ ಜಿ.ಟಿ., ಸುಮಿತ್ರಾ ಜಿ.ಟಿ., ಶಾಲೆಯ ಶಿಕ್ಷಕರಾದ ದೇವು, ಮಾಲಾಶ್ರೀ, ಭೂದೇವಿ, ಅಕ್ಷತಾ ಮೊದಲಾದವರು ಉಪಸ್ಥಿತರಿದ್ದರು.

ಈಶ್ವರ ಜಿ. ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಶ್ರೀಕಾಂತ ಎಸ್. ವಂದಿಸಿದರು.

Leave a Reply