ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ರಿ. ಬೈಂದೂರು ವಲಯದ ಶಿರೂರು ಬಿ ಕಾರ್ಯಕ್ಷೇತ್ರದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಗುರುವಾರ ಜರುಗಿತು.
ಯೋಜನೆಯ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕರು ಶಿವರಾಯ ಪ್ರಭು ಅವರು ಪರಿಸರ ಜಾಗೃತಿ ಕುರಿತು ಮಾಹಿತಿ ನೀಡಿ ಗಿಡ ವಿತರಣೆ ಮಾಡಿದರು. ಸಾಂಕೇತಿಕವಾಗಿ ಗಿಡ ನೆಡಲಾಯಿತು. ಕಾರ್ಯಕ್ರಮದಲ್ಲಿ ಬೈಂದೂರು ತಾಲೂಕಿನ ಯೋಜನಾಧಿಕಾರಿಗಳಾದ ವಿನಾಯಕ ಪೈ ಬೈಂದೂರು ತಾಲೂಕಿನ ಕೇಂದ್ರ ಸಮಿತಿ ಒಕ್ಕೂಟದ ಅಧ್ಯಕ್ಷರಾದ ರಘುರಾಮ ಕೆ. ಪೂಜಾರಿ, ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ಕೃಷ್ಣ ಪೂಜಾರಿ, ಜನಜಾಗೃತಿ ಸದಸ್ಯರಾದ ವಾಸು ಮೇಸ್ತ, ಶಿರೂರು ಬಿ ಒಕ್ಕೂಟದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಹಾಗೂ ವಲಯದ ಮೇಲ್ವಿಚಾರಕರಾದ ರಾಮಚಂದ್ರ ಎಸ್., ಕೃಷಿ ಅಧಿಕಾರಿಗಳಾದ ಮಂಜುನಾಥ ಗೌಡ ಮತ್ತು ರಾಜು ಹಾಗೂ ಸೇವಾಪ್ರತಿನಿಧಿಗಳು, ಪದಾಧಿಕಾರಿಗಳು, ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.