ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಲ್ಲಿನ ಸೆಂಟ್ ಥೋಮಸ್ ಶಾಲೆಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಫಾದರ್ ಜೈಶನ್ ನೆಲಿವಿಲ್ಲಾ ಮಾತನಾಡಿ ಪ್ರಕೃತಿಯ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮನುಷ್ಯ ತನ್ನ ಅನುಕೂಲಕ್ಕೆ ತಕ್ಕಂತೆ ಪ್ರಕೃತಿಯನ್ನು ಬಳಸಿಕೊಂಡು ಅದನ್ನು ವಿಕೃತಿಗೊಳಿಸುತ್ತಿದ್ದಾನೆ. ವಿದ್ಯಾರ್ಥಿಗಳು ಪರಿಸರದ ರಕ್ಷಣೆಯಲ್ಲಿ ಪಾಲುದಾರಾಗಬೇಕು ಎಂದು ತಿಳಿಸಿದರು.
ವಿದ್ಯಾರ್ಥಿನಿ ಮರಿಯಾ ರೆಬೆರೋ ಪರಿಸರದ ದಿನಾಚರಣೆಯ ಕುರಿತು ಮಾಹಿತಿಯನ್ನು ನೀಡಿದಳು. ಸಂಸ್ಥೆಯ ವಿದ್ಯಾರ್ಥಿಗಳು ಪರಿಸರದ ರಕ್ಷಣೆಯ ಕುರಿತು ಕಿರು ಪ್ರಹಸನವನ್ನು ಪ್ರಸ್ತುತ ಪಡಿಸಿದರು.ಈ ಸಂದರ್ಭದಲ್ಲಿ ಪಿಯು ಪ್ರಾಂಶುಪಾಲರಾದ ರೂಬೆಲ್ ಐರಾವೆಲಿ & ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಹತ್ತನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಸ್ವಾಗತಿಸಿ ಕಾರ್ಯಕ್ರಮವನ್ನು ನಿರ್ವಹಿಸಿದರು.