ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಜೂ.09: ಕುಂದಾಪುರ ಕಡೆಯಿಂದ ಭಟ್ಕಳಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂಪರ ಸಂಘಟನೆಗಳು ನೀಡಿದ ಮಾಹಿತಿ ಆದರಿಸಿ ಬೆನ್ನತ್ತಿದ ಬೈಂದೂರು ಪೊಲೀಸರು ಒತ್ತಿನಣೆ ಬಳಿ ತಡೆಹಿಡಿದು, ಎರಡು ಕ್ವಿಂಟಲಿಗೂ ಅಧಿಕ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕ ಕರ್ಕುಂಜೆಯ ಮಹಮ್ಮದ್ ಅಲ್ತಾಫ್ (37) ಹಾಗೂ ಕಾರಿನಲ್ಲಿದ್ದ ಮೂವರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ನೊಂದಣಿ ಹೊಂದಿರುವ ಚೆವರ್ಲೆಟ್ ಬಾಡಿಗೆ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡಲಾಗಿದ್ದು, ಇದೇ ಕಾರಿನಲ್ಲಿ ಮುಸ್ಲಿಂ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದರು. ಕಾರಿನ ಡಿಕ್ಕಿಯಲ್ಲಿ ಎರಡು ಕ್ವಿಂಟಲಿಗೂ ಅಧಿಕ ಪ್ರಮಾಣದ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಯಾರಿಗೂ ಸಂಶಯ ಬರಬಾರದು ಎಂಬ ಕಾರಣಕ್ಕೆ ಮೂವರು ಮುಸ್ಲಿಂ ಮಹಿಳೆಯರನ್ನು ಇದೇ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು ಎನ್ನಲಾಗುತ್ತಿದ್ದು, ಅವರನ್ನೂ ವಶಕ್ಕೆ ಪಡೆಯಲಾಗಿದೆ. ಸದ್ಯ ಅವರನ್ನು ಮಹಿಳಾ ನಿಲಯಕ್ಕೆ ಕಳುಹಿಸಲಾಗಿದ್ದು, ಬೆಳಿಗ್ಗೆ ವಿಚಾರಣೆಯ ನಡೆಸಿ, ನ್ಯಾಯಾಲಕ್ಕೆ ಹಾಜರುಪಡಿಸಲಾಗುತ್ತದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಅವರ ನಿರ್ದೇಶನದಂತೆ, ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್ ಕಾರ್ಯಾಚರಣೆ ನಡೆಸಿದ್ದಾರೆ. ಪ್ರೊಬೇಷನರಿ ಪಿಎಸ್ಐ ಮಮತಾ ನಾಯ್ಕ್, ಪೊಲೀಸ್ ಕಾನ್ಸ್ಟೇಬಲ್ ಅಶೋಕ್ ರಾಥೋಡ್, ಶ್ರೀನಿವಾಸ್, ಸುಜೀತ್ ಕುಮಾರ್, ಪೊಲೀಸ್ ವಾಹನ ಚಾಲಕರಾದ ಚಂದ್ರ ಪೂಜಾರಿ, ಚಂದ್ರ ಮರಾಠಿ ಹಾಗೂ ಸುಧೀರ್ ಪೂಜಾರಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. / ಕುಂದಾಪ್ರ ಡಾಟ್ ಕಾಂ ಸುದ್ದಿ/