ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂ.14: ಮಾಜಿ ಶಾಸಕ, ಹಿರಿಯ ಮುತ್ಸದ್ದಿ ಎ.ಜಿ.ಕೊಡ್ಗಿ (93) ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಅಮಾಸೆಬೈಲಿನಲ್ಲಿ ನಡೆಯಿತು.
ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಗಣ್ಯರು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದ್ದರು. ಅಂತ್ಯಸಂಸ್ಕಾರಕ್ಕೂ ಮುನ್ನ ಸಾರ್ವಜನಿಕ ದರ್ಶನಕ್ಕೆ ಅವಕಾಶವನ್ನು ಅಮಾಸೆಬೈಲುವಿನ ಗೋಕುಲ್ ಇಂಡಸ್ಟ್ರೀಸ್ ವಠಾರದಲ್ಲಿ ಮಾಡಿಕೊಡಲಾಗಿತ್ತು.
► ಮಾಜಿ ಶಾಸಕ, ಆಧುನಿಕ ಅಮಾಸೆಬೈಲುವಿನ ನಿರ್ಮಾತೃ ಎ.ಜಿ. ಕೊಡ್ಗಿ ನಿಧನ – https://kundapraa.com/?p=59835 .
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಗೃಹ ಸಚಿವ ಅರಗ ಜ್ಞಾನೆಂದ್ರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಾಸಕರಾದ ಲಾಲಾಜಿ ಆರ್. ಮೆಂಡನ್, ಹರೀಶ್ ಪೂಂಜಾ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಕುಂದಾಪುರ ತಹಶಿಲ್ದಾರ್ ಕಿರಣ್ ಗೌರಯ್ಯ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ಸಹಿತ ಅನೇಕ ಗಣ್ಯರು ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದ್ದರು.
5 ವರ್ಷಗಳ ಹಿಂದೆ ಎ.ಜಿ. ಕೊಡ್ಗಿ ಅವರೊಂದಿಗೆ ‘ಕುಂದಾಪ್ರ ಡಾಟ್ ಕಾಂ’ ನಡೆಸಿದ ಸಂದರ್ಶನ ► ಆಧುನಿಕ ಅಮಾಸೆಬೈಲುವಿನ ನಿರ್ಮಾತೃ ಎ.ಜಿ. ಕೊಡ್ಗಿ – https://kundapraa.com/?p=3243 .



















