Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಪಾರು: ಕುಂದನಾಡು ರೈತ ಉತ್ಪಾದಕರ ಕಂಪೆನಿ ಉದ್ಘಾಟನೆ
    ಊರ್ಮನೆ ಸಮಾಚಾರ

    ಅಂಪಾರು: ಕುಂದನಾಡು ರೈತ ಉತ್ಪಾದಕರ ಕಂಪೆನಿ ಉದ್ಘಾಟನೆ

    Updated:19/06/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಜೂ.19:
    ಕೃಷಿ ವಲಯದಲ್ಲಿ ಇವತ್ತು ಸಾಕಷ್ಟು ಬದಲಾವಣೆಗಳು ಆಗಿವೆ. ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ, ಸವಲತ್ತುಗಳನ್ನು ಒದಗಿಸುವ ಕೆಲಸವೂ ನಡೆಯುತ್ತಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತದೆ. ಇವತ್ತು ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ವಿದ್ಯಾರ್ಥಿದಿಸೆಯಿಂದಲೇ ಆಗಬೇಕಾದ ಅನಿವಾರ್ಯತೆಯಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.

    Click Here

    Call us

    Click Here

    ಅವರು ಅಂಪಾರು ವಿದ್ಯಾದಾಯಿನಿ ಸಭಾಭವನದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೆರವಿನೊಂದಿಗೆ ಕೃಷಿ, ತೋಟಗಾರಿಕೆ, ಜಲಾನಯನ ಮತ್ತು ಅಟಲ್ ಇನ್ಕ್ಯೂಬೇಷನ್ ಸೆಂಟರ್ ನಿಟ್ಟೆ ಇವರ ಸಹಕಾರದಲ್ಲಿ ಆರಂಭಗೊಂಡ ವಂಡ್ಸೆ ಹೋಬಳಿಯ ‘ಕುಂದನಾಡು ರೈತ ಉತ್ಪಾದಕರ ಕಂಪೆನಿ’ ಉದ್ಘಾಟಿಸಿ ಮಾತನಾಡಿದರು.

    ಕುಂದನಾಡು ರೈತ ಉತ್ಪಾದಕ ಕಂಪೆನಿಯ ಷೇರುಪತ್ರವನ್ನು ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ವಿತರಿಸಿದರು.

    ರಾಜ್ಯ ವಿಧಾನ ಪರಿಷತ್ತಿನ ಮಾಜಿ ಸಬಾಪತಿ, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾಂತ್ರೀಕೃತ ಕೃಷಿಗೆ ಹೆಚ್ಚಿನ ಉತ್ತೇಜನ ಸಿಗಬೇಕು. ಇವತ್ತು ಸಣ್ಣ ಹಿಡುವಳಿದಾರರಿಗೆ ಸೂಕ್ತ ಸೌಲಭ್ಯಗಳು ಸಿಗುತ್ತಿಲ್ಲ. ವ್ಯವಸಾಯಗಾರರಿಗಾಗಿ ಆರಂಭವಾದ ಸಹಕಾರ ಕ್ಷೇತ್ರವೂ ಇವತ್ತು ಆ ನಿಟ್ಟಿನಲ್ಲಿ ಸಾಗುತ್ತಿಲ್ಲ. ಆ ಹಿನ್ನೆಲೆಯಲ್ಲಿ ಕುಂದಾನಾಡು ರೈತ ಉತ್ಪಾದಕರ ಕಂಪೆನಿ ಯಶಸ್ಸು ಗಳಿಸಲಿ ಎಂದರು.

    ಇವತ್ತು ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಧಾರಣೆ ಸಿಗುವಂತಾಗಬೇಕು. ಅಂದರೆ ಆ ವಸ್ತುಗಳು ಮೌಲ್ಯವರ್ಧನೆ ಮಾಡಬೇಕು. ತೆಂಗಿನ ಕಾಯಿಗೆ ಇವತ್ತು ಧಾರಣೆ ಕುಸಿದಿದೆ. ಆದರೆ ತೆಂಗಿನ ಎಣ್ಣೆ, ಇತರ ಉತ್ಪನ್ನಗಳ ಧಾರಣೆ ಇಳಿದಿಲ್ಲ. ಹಾಗಾಗಿ ಇಂತಹ ಸಂಸ್ಥೆಗಳು ಶುದ್ಧ ತೆಂಗಿನ ಎಣ್ಣೆ ತಯಾರಿಸುವ ಘಟಕಗಳನ್ನು ಪ್ರಾರಂಭಿಸಿ ರೈತ ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡಬೇಕು. ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಬೇಕು ಎಂದರು.

    Click here

    Click here

    Click here

    Click Here

    Call us

    Call us

    ರೈತರ ಉತ್ಪಾದಕರ ಸಂಸ್ಥೆಗಳ ಉತ್ಕೃಷ್ಟ ಕೇಂದ್ರ ಬೆಂಗಳೂರು ಇದರ ನಿರ್ದೇಶಕರಾದ ಡಾ.ಅಶೋಕ ಆಲೂರ, ಉಡುಪಿ ಜಿಲ್ಲಾ ಜಂಟೀ ಕೃಷಿ ನಿರ್ದೇಶಕ ಕೆಂಪೇಗೌಡ ಹೆಚ್, ಜಿಲ್ಲಾ ತೋಟಗಾರಿಕಾ ಉಪ ನಿರ್ದೇಶಕರಾದ ಶ್ರೀಮತಿ ಭುವನೇಶ್ವರಿ, ಅಟಲ್ ಇನ್ಕ್ಯೊಬೇಷನ್ ಸೆಂಟರ್ ನಿರ್ದೇಶಕರಾದ ಡಾ.ಎ.ಪಿ ಆಚಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    ನಿರ್ದೇಶಕರುಗಳಾದ ಶರತ್ ಕುಮಾರ್ ಶೆಟ್ಟಿ ದೇವಲ್ಕುಂದ, ಚಂದ್ರಶೇಖರ ಉಡುಪ ಕೆಂಚನೂರು, ಶರತ್ಚಂದ್ರ ಶೆಟ್ಟಿ ಗುಲ್ವಾಡಿ, ಸದಾಶಿವ ಶೆಟ್ಟಿ ಶಂಕರನಾರಾಯಣ, ವಿವೇಕ ಭಂಡಾರಿ ಗುಲ್ವಾಡಿ, ಉದಯ ಜಿ.ಪೂಜಾರಿ ಚಿತ್ತೂರು, ಸತೀಶ್ ಶೆಟ್ಟಿ ಹಕ್ಲಾಡಿ, ಗೋವರ್ಧನ್ ಶೆಟ್ಟಿ ಇಡೂರು, ವಿಜಯ ಶೆಟ್ಟಿ ಮಚ್ಚಟ್ಟು, ಅನುರಾಧ ವಿ ಮಂಜ ಸೇನಾಪುರ, ಮಲ್ಲಿಕಾ ಶೆಟ್ಟಿ ಅಂಪಾರು, ಜ್ಯೋತಿ ಶೆಟ್ಟಿ ಮೂಡುಬಗೆ, ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಅಜಿತ್ ಆಚಾರ್ ಉಪಸ್ಥಿತರಿದ್ದರು.

    ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಸ್ವಾಗತಿಸಿದರು. ಗೌರವಾಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ವಂಡ್ಸೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಉಮೇಶ್ ಶೆಟ್ಟಿ ಶಾನ್ಕಟ್ಟು ವಂದಿಸಿದರು. ಕೀರ್ತನಾ ಉಮೇಶ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    11 + 4 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.