ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 634 ಕಾಲು ಸಂಕ ನಿರ್ಮಾಣದ ಬಗ್ಗೆ ಸಂಸದ ಬಿ.ವೈ ರಾಘವೇಂದ್ರ ಚರ್ಚೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶದಲ್ಲಿನ ರಸ್ತೆ ಹಾಗೂ ತೊರೆಗಳನ್ನು ದಾಟುವ ಸಂದರ್ಭ ಜನ ಮತ್ತು ಜಾನುವಾರುಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ. ಸುತ್ತುಬಳಸಿ ಊರು ಸೇರಬೇಕಾದ ಪರಿಸ್ಥಿತಿಯೂ ಇದ್ದು ಇದನ್ನು ತಡೆಗಟ್ಟಲು ಒಟ್ಟು 634 ಕಾಲು ಸಂಕಗಳನ್ನು ನಿರ್ಮಾಣ ಮಾಡುವ ಅವಶ್ಯಕತೆ ಇದೆ ಎಂದು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರಾದ ಬಿ. ವೈ. ರಾಘವೇಂದ್ರ ಪ್ರತಿಪಾದಿಸಿದ್ದಾರೆ.

Call us

Click Here

ದೆಹಲಿಯಲ್ಲಿ ಗುರುವಾರ ನಡೆದ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸಭೆಯಲ್ಲಿ ಬಿ. ವೈ. ರಾಘವೇಂದ್ರ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರವು ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿ ಮತ್ತು ಮಲೆನಾಡಿನ ವಿಶಿಷ್ಟ ಭೂಸ್ವರೂಪವನ್ನು ಹೊಂದಿದ್ದು, ಅಂದಾಜು 4,954 ಕುಗ್ರಾಮಗಳಿವೆ. ಮಾನವ ವಾಸವು ಚದುರಿದ ಮತ್ತು ಗುಡ್ಡಗಾಡು ಪರ್ವತಗಳಲ್ಲಿ ಭಾಗದಲ್ಲಿ ಇರುವುದರಿಂದ ಮಳೆಗಾಲದಲ್ಲಿ ತುಂಬಿ ಹರಿಯುವ ಸಣ್ಣ ತೊರೆಗಳನ್ನು ಶಾಲಾ ಮಕ್ಕಳು ಸ್ಥಳೀಯ ಕಾಲು ಸೇತುವೆಗಳ ಮೇಲೆ ದಾಟುವುದು ಕಷ್ಟಕರ ಮತ್ತು ಸವಾಲಿನದ್ದಾಗಿದೆ. ಅಂಗನವಾಡಿ ಕೇಂದ್ರಗಳಿಗೆ ಕಾಂಪೌಂಡ್ ನಿರ್ಮಾಣ ಮಾಡುವ ಅವಶ್ಯಕತೆಯೂ ಇದೆ ಎಂದವರು ಹೇಳಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಪಾಯಕಾರಿಯಾಗಿರುವ ಒಟ್ಟು 53 ಕಾಲುಸಂಕಗಳನ್ನು ಹಾಗೂ 27 ಅಂಗನವಾಡಿ ಕಾಂಪೌಂಡ್ ನಿರ್ಮಾಣದ ಅವಶ್ಯಕತೆ ಇರುವುದನ್ನು ಗುರುತಿಸಲಾಗಿದೆ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಜಾದವ್, ಸಮಿತಿ ಸದಸ್ಯರು ಮತ್ತು ಅಧಿಕಾರಿಗಳೊಂದಿಗೆ ಸಭೆಯಲ್ಲಿ ಈ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆದಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಸಂಸದರು ತಿಳಿಸಿದ್ದಾರೆ.

Leave a Reply