ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 16 ಟನ್ ಅನ್ನಭಾಗ್ಯದ ಅಕ್ಕಿ ವಶಕ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಜೂ.23:
ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕುಂದಾಪುರ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ. ಮತ್ತವರ ತಂಡ ವಶಕ್ಕೆ ಪಡೆದ ಘಟನೆ ಬೈಂದೂರಿನಲ್ಲಿ ನಡೆದಿದೆ.

Call us

Click Here

ಜೂ. 22 ರಂದು ಡಿವೈಎಸ್ಪಿ ಶ್ರೀಕಾಂತ್ ಕೆ. ಅವರು ಗಸ್ತಿನಲ್ಲಿರುವಾಗ ಶಿರೂರು ಕಡೆಯಿಂದ ಒಂದು ಟಾಟಾ ಕಂಪೆನಿಯ ಲಾರಿಯಲ್ಲಿ ಸರಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಕಾನೂನು ಬಾಹಿರವಾಗಿ ಸಂಗ್ರಹಿಸಿ ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿರುವುದಾಗಿ ಬಂದ ಮಾಹಿತಿಯಂತೆ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ತೆರಳಿ ಸಿಬ್ಬಂದಿಗಳೊಂದಿಗೆ ಹಾಗೂ ಬೈಂದೂರು ಆಹಾರ ನಿರೀಕ್ಷಕರು, ಗ್ರಾಮ ಲೆಕ್ಕಿಗರೊಂದಿಗೆ ಕಾದುಕೊಂಡಿರುವಾಗ ಶಿರೂರು ಕಡೆಯಿಂದ ಒಂದು ಟಾಟಾ ಕಂಪೆನಿಯ ಲಾರಿ ಬರುವುದನ್ನು ನೋಡಿ ಸಿಬ್ಬಂದಿಗಳ ಸಹಾಯದಿಂದ ಲಾರಿಯನ್ನು ನಿಲ್ಲಿಸಿದ್ದಾರೆ.

ಈ ವೇಳೆ ಲಾರಿಯಲ್ಲಿ ಚಾಲಕ ಬೆಂಗಳೂರು ದಕ್ಷಿಣ ಹೊನ್ನಗಟ್ಟಿ ನಿವಾಸಿ ಸುನೀಲ್ ಹೆಚ್.ಆರ್ (22) ಮತ್ತು ಇನ್ನೋರ್ವ ವ್ಯಕ್ತಿ ಭಟ್ಕಳ ನಿವಾಸಿ ಮಹಮ್ಮದ್ ಸಮೀರ (25) ಅವರನ್ನು ಲಾರಿಯಲ್ಲಿರುವ ಲೋಡಿನ ಬಗ್ಗೆ ವಿಚಾರಿಸಿದಾಗ ಅಕ್ಕಿಯ ಚೀಲಗಳು ಎಂಬುದಾಗಿ ತಿಳಿಸಿದ್ದಾನೆ. ಲಾರಿಯೊಳಗಿರುವ ಅಕ್ಕಿಯ ಚೀಲಗಳ ಬಗ್ಗೆ ಕೂಲಂಕುಷವಾಗಿ ವಿಚಾರಿಸಿದಲ್ಲಿ ಸರಕಾರದಿಂದ ಉಚಿತ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿ ಎಂಬುದಾಗಿ ತಿಳಿಸಿದ್ದಾನೆಂದು ದೂರಿನಲ್ಲಿ ವಿವರಿಸಲಾಗಿದೆ.

ಲಾರಿಯಲ್ಲಿ 320 ಬಿಳಿ ಪಾಲಿಥೀನ್ ಚೀಲಗಳು ಇದ್ದು ಪರಿಶೀಲಿಸಿದಾಗ ಪ್ರತಿ ಚೀಲವು 50 ಕೆಜಿ ಇದ್ದು ಒಟ್ಟು 16 ಟನ್ ನಷ್ಟು ಅಕ್ಕಿ ಇದ್ದಿತ್ತು. ಈ ಪಡಿತರ ಅಕ್ಕಿ ಮೌಲ್ಯ 4 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಪೊಲೀಸರು ಲಾರಿ ಹಾಗೂ ಚಾಲಕನ ಸಿಟಿನ ಬದಿಯಲ್ಲಿ 3 ಗೋಣಿ ಚೀಲಗಳು ಹಾಗೂ ಚೀಲವನ್ನು ಹೊಲಿಯುವ ಯಂತ್ರ, 320 ಅಕ್ಕಿ ತುಂಬಿದ ಚೀಲಗಳು, 3 ಗೋಣಿ ಚೀಲಗಳು ಹಾಗೂ ಚೀಲ ಹೊಲಿಯುವ ಯಂತ್ರವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply