ಗಂಗೊಳ್ಳಿ: ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ 2014-15ನೇ ಸಾಲಿನ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಸಂಘದ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. ನಾಗ ಖಾರ್ವಿ ಅವರು ಸಂಘವು 2014-15ನೇ ಸಾಲಿನಲ್ಲಿ ರೂ 30,70,975.02 ನಿವ್ವಳ ಲಾಭ ಗಳಿಸಿದ್ದು, ಸದಸ್ಯರ ಪಾಲು ಬಂಡವಾಳಕ್ಕೆ ಶೇ.೨೫ ಡಿವಿಡೆಂಡ್ ನೀಡಲಾಗುವುದು. ಸಂಘದ ಸದಸ್ಯರಿಗೆ ಸರಕಾರದಿಂದ ಸಿಗುವ ಸವಲತ್ತುಗಳನ್ನು ತರಿಸಿ ಕೊಡುವರೇ ಮುತವರ್ಜಿ ವಹಿಸುತ್ತಿದ್ದೇವೆ ಎಂದರು.
ಸಂಘದ ಉಪಾಧ್ಯಕ್ಷ ಪ್ರಕಾಶ್ ಆರ್. ಖಾರ್ವಿ, ನಿರ್ದೇಶಕರಾದ ಮೋಹನ ಖಾರ್ವಿ, ವಿಘ್ನೇಶ್ ಖಾರ್ವಿ, ಮಾಧವ ಖಾರ್ವಿ, ಶಂಕರ ಖಾರ್ವಿ, ದಿನೇಶ್ ಖಾರ್ವಿ, ತಿಮ್ಮಪ್ಪ ಖಾರ್ವಿ, ಸರೋಜಿನಿ, ಶಶಿಕಲಾ, ಶ್ರೀಮತಿ ಸುಮತಿ, ಜಿ. ಪಾಂಡು ಖಾರ್ವಿ, ಕೆ. ಅಜಂತ ಖಾರ್ವಿ, ರತ್ನಾಕರ ಖಾರ್ವಿ ಉಪಸ್ಥಿತರಿದ್ದರು.
ಸಂಘದ ವ್ಯವಸ್ಥಾಪಕ ಮೋಹನ ಖಾರ್ವಿ ಅವರು 2014-15ನೇ ಸಾಲಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಸಂಘದ ಸಿಬ್ಬಂದಿ ಪಾಂಡುರಂಗ ಮಡಿವಾಳ ಕಾರ್ಯಕ್ರಮ ನಿರೂಪಿಸಿದರು.