ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಕಾರ್ಯಕ್ರಮದಲ್ಲಿ, ಕುಂದಾಪುರದ ಓಕ್‌ವುಡ್ ಇಂಡಿಯನ್ ಸ್ಕೂಲ್‌ಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪೋಟ್೯ಗೇಟ್ ಎಜ್ಯುಕೇಶನ್‌ನ ಕಾಯ೯ದಶಿ೯ ನೀತಾ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಐ ಗೋವಿಂದ ಮಡಿವಾಳ ಹಾಗೂ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಚಂದ್ರಾ ನಾಯಕ್ ಸ್ವಾಗತಿಸಿ , ವಂದಿಸಿದರು.