Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಶಿಕ್ಷಕ-ರಕ್ಷಕ ಸಂಘದ ಪ್ರಥಮ ಸಭೆ
    Uncategorized

    ಗಂಗೊಳ್ಳಿ: ಶಿಕ್ಷಕ-ರಕ್ಷಕ ಸಂಘದ ಪ್ರಥಮ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ೨೦೨೨-೨೩ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಸಭೆ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ಮಾತನಾಡಿದ ಶಾಲೆಯ ಸಂಚಾಲಕ ಎನ್. ಸದಾಶಿವ ನಾಯಕ್, ಕಳೆದ ಎರಡು ವರ್ಷಗಳಲ್ಲಿ ಕೋವಿಡ್‌ನಿಂದ ಶಾಲೆಗೆ ಬಹಳಷ್ಟು ಸಮಸ್ಯೆಗಳಾಗಿದೆ. ಸರಕಾರ ನೀತಿ ನಿಯಮಗಳಿಗೆ ಅನುಸಾರವಾಗಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಶಾಲೆಯ ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸರಕಾರ ಶಾಲಾ ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡಿದ್ದರೂ ಪೋಷಕರಿಗೆ ಹೊರೆಯಾದಂತೆ ಅತಿ ಕಡಿಮೆ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಶಾಲೆ ಉತ್ತಮ ಸಾಧನೆ ಮಾಡಿದ್ದು, ಮಕ್ಕಳ ದಾಖಲಾತಿಯಲ್ಲೂ ಈ ವರ್ಷ ಉತ್ತಮ ಪ್ರಗತಿಯಾಗಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ಶಾಲೆಯ ನೀತಿ, ನಿಯಮ, ಶಿಸ್ತು ಮೊದಲಾದವುಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶಾಂತಿ ಡಿಕೋಸ್ತ ಅವರು ಮಕ್ಕಳ ವಿಚಾರದಲ್ಲಿ ಪೋಷಕರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳು ಹಾಗೂ ಇನ್ನಿತರ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪೋಷಕರು ಸಲಹೆ ಸೂಚನೆ ನೀಡಿದರು. ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

    ಶಿಕ್ಷಕಿ ವೀಣಾ ಎಚ್. ಸ್ವಾಗತಿಸಿದರು. ಪೋಷಕ ಪ್ರತಿನಿಧಿ ಮಂಜುಳಾ ದೇವಾಡಿಗ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಸುಜಾತಾ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ರೇಷ್ಮಾ ಚಿತ್ತಾಲ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    11 − 9 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.