ಹೆಬ್ರಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ, ಬೇರೆಡೆ ಎಂದಿನಂತೆ ಶಾಲಾ ಕಾಲೇಜು
ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿದ್ದು, ಜುಲೈ 7ರವರೆಗೂ ಗುಡುಗು ಸಹಿತ ಭಾರೀ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಭಾರತೀಯ ಹವಾಮಾನ ಇಲಾಖೆ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿ ಎಚ್ಚರಿಕೆ ನೀಡಿದೆ.
ಕರಾವಳಿ ಭಾಗದಲ್ಲಿ ಮುಂಗಾರು ಮಾರುತಗಳು ಹೆಚ್ಚು ಸಕ್ರಿಯವಾಗಿದ್ದರಿಂದ ಮಳೆ ಕಳೆದೊಂದು ವಾರದಿಂದ ವಿವಿಧೆಡೆ ಮಳೆ ಸುರಿಯುತ್ತಲೇ ಇದೆ. ಜುಲೈ 5 ಮತ್ತು 6ರಂದು ಮಳೆಯ ತೀವ್ರತೆ ಹೆಚ್ಚಾಗುವ ಕಾರಣಕ್ಕೆ ಅಂದು ಕರಾವಳಿಯ ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಸಿಲಾಗಿದೆ. ಉಳಿದ ದಿನ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯು ಪ್ರತಿ ಗಂಟೆಗೆ ಸುಮಾರು 50 ಕಿ. ಮೀ. ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದೈದ್ಯ ಅಲೆಗಳು ತೀರಕ್ಕೆ ಬಂದು ಅಪ್ಪಳಿಸುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಅಧಿಕಾರಿಗಳು ತಿಳಿಸಿದ್ದಾರೆ.
ಶಾಲೆಗಳಿಗೆ ರಜೆ: (Updated)
ಭಾರಿ ಮಳೆ ಮುಂದುವರಿದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.05) ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಳ್ತೂರು ಗ್ರಾಮದಲ್ಲಿ ಮಹಿಳೆ ಸಾವು:
ಮಳೆ ತೀವ್ರತೆ ಹೆಚ್ಚಿರುವುದರಿಂದ ಜಿಲ್ಲೆಯ ವಿವಿಧೆಡೆ ಸಣ್ಣ ಪುಟ್ಟ ಅವಘಡಗಳು ನಡೆದಿದೆ. ಉಳ್ತೂರು ಗ್ರಾಮದ ಹಲ್ತೂರು ಎಂಬಲ್ಲಿ ಗದ್ದೆಯ ಕೆಲಸಕ್ಕೆ ತೆರಳಿದ್ದ ಲಕ್ಷ್ಮೀ (50) ಎಂಬ ಮಹಿಳೆ ನೀರಿನ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ.
ಮರವಂತೆ, ಕಂಚುಗೋಡು, ಶಿರೂರು ಭಾಗದ ಕೆಲವೆಡೆ ಕಡಲ್ಕೊರೆತ ಕಂಡುಬಂದಿದೆ. ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಈಗಾಗಲೇ ಸೂಚನೆ ನೀಡಲಾಗಿದೆ. ನಾವುಂದದ ಸಾಲ್ಬುಡ, ಬಡಾಕೆರೆ, ಚಿಕ್ಕಳ್ಳಿ ಭಾಗದಲ್ಲಿ ನೆರೆ ಹೆಚ್ಚಿದ್ದು, ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.