ಬೈಂದೂರು ಇನ್ನರ್‌ವೀಲ್ ಕ್ಲಬ್ ನೂತನ ಅಧ್ಯಕ್ಷೆ ಭಾನುಮತಿ ಬಿ.ಕೆ. ಪದಪ್ರದಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್‌ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ ಇಲ್ಲ. ಮನಸಿಗೆ ತೃಪ್ತಿ ನೀಡುವ ಉತ್ತಮ ಸೇವೆಗಳಿಂದ ಸಿಗುವ ಸಂತೋಷ ಶಾಶ್ವತವಾಗಿರುತ್ತದೆ. ಅಲ್ಲದೇ ಜೀವನದ ಜಂಜಾಟದಿಂದ ಸ್ವಲ್ಪ ಮಟ್ಟಿನ ನೆಮ್ಮದಿಯನ್ನು ಇದರಲ್ಲಿ ಕಾಣಬಹುದಾಗಿದೆ ಎಂದು ಕಾಸರಗೋಡಿನ ಬ್ರಹ್ಮಕುಮಾರಿ ಬಿ. ಕೆ. ವಿಜಯಲಕ್ಷ್ಮೀ ಹೇಳಿದರು.

Call us

Click Here

ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ನಡೆದ ಇನ್ನರ್‌ವೀಲ್ ಕ್ಲಬ್‌ನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಪರಸ್ಪರ ಗೆಳೆತನದಿಂದ ಕೂಡಿ ಬಾಳುವ ಒಂದು ಕುಟುಂಬದಂತಿರುವ ಇನ್ನರ್‌ವೀಲ್ ಕ್ಲಬ್ಬಿನಲ್ಲಿ ಎಲ್ಲಾ ಸಹೋದರಿಯರು ಸಂಘಟಿತರಾಗಿ ಸ್ವ-ಬೆಳವಣಿಗೆಯೊಂದಿಗೆ ಊರಿಗೆ ಹಾಗೂ ಸಮಾಜಕ್ಕೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡುವಂತಾದಾಗ ಮಾತ್ರ ಶತ್ರುತ್ವ ಮರೆಯಾಗಿ ಕತ್ತಲೆಯ ಒಳಗಿರುವ ಜ್ಞಾನ, ಭರವಸೆಗಳೆಂಬ ಬೆಳಕಿನ ಬೀಜದಂತೆ ಭವಿಷ್ಯದ ಬಾಳು ಬೆಳಗುತ್ತದೆ ಎಂದರು.

೨೦೨೨-೨೩ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಆಯ್ಕೆಯದ ಭಾನುಮತಿ ಬಿ. ಕೆ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪಿಂಕಿ ಮೋಬಿ ಕರ್ವಾಲೋ ಇವರಿಗೆ ಪದಗ್ರಹಣ ಅಧಿಕಾರಿ ಚಂದ್ರಕಲಾ ಎಸ್. ಶೆಟ್ಟಿ ಇವರು ಪದಪ್ರದಾನಿಸಿ ಶುಭಹಾರೈಸಿದರು.

ರೋಟರಿ ಉಪಾಧ್ಯಕ್ಷ ಗೋವಿಂದ ಎಂ. ಸ್ಪಂದನಾ ಬುಲೆಟಿನ್ ಬಿಡುಗಡೆ ಮಾಡಿದರು. ಐವರು ನೂತನ ಸದಸ್ಯರಾಗಿ ಸೇರ್ಪಡೆಯಾದರು. ನಿರ್ಗಮನ ಅಧ್ಯಕ್ಷೆ ಶಾಂತಿ ಪಿರೇರಾ ಇದ್ದರು. ಶಾರದಾ ಕೆ. ಪ್ರಾರ್ಥಿಸಿದರು. ನಿರ್ಗಮನ ಕಾರ್ಯದರ್ಶಿ ಮಾನಸಾ ರಾವ್ ವರದಿ ಮಂಡಿಸಿದರು. ರಾಜೀವಿ ಗೋವಿಂದ್ ನಿರೂಪಿಸಿ, ಉಪಾಧ್ಯಕ್ಷೆ ಆಶಾ ಕಿಶೋರ್ ವಂದಿಸಿದರು.

Leave a Reply