Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ವಸಂತಕುಮಾರ ಪೆರ್ಲ ಅವರಿಗೆ ಕೊ.ಅ. ಉಡುಪ ಪ್ರಶಸ್ತಿ
    Uncategorized

    ಡಾ. ವಸಂತಕುಮಾರ ಪೆರ್ಲ ಅವರಿಗೆ ಕೊ.ಅ. ಉಡುಪ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಯುಗಪುರುಷ ಪತ್ರಿಕೆಯ ಸಂಸ್ಥಾಪಕ ಕೊಡತ್ತೂರು ಅನಂತಪದ್ಮನಾಭ ಉಡುಪರ ಸ್ಮರಣಾರ್ಥ ಸ್ಥಾಪಿಸಲಾಗಿರುವ ಕೊ. ಅ. ಉಡುಪ ಪ್ರಶಸ್ತಿಗೆ ಈ ಬಾರಿ ಕವಿ ಸಾಹಿತಿ ಚಿಂತಕ ಡಾ. ವಸಂತಕುಮಾರ ಪೆರ್ಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪತ್ರಿಕೆಯ ಪ್ರಕಾಶಕ – ಸಂಪಾದಕ ಕೆ. ಭುವನಾಭಿರಾಮ ಉಡುಪ ತಿಳಿಸಿದ್ದಾರೆ.

    Click Here

    Call us

    Click Here

    ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು, ಫಲಕ, ಪ್ರಶಸ್ತಿಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದೆ. ಇದೇ ತಿಂಗಳ 24 ರಂದು ಕಿನ್ನಿಗೋಳಿಯಲ್ಲಿ ಜರಗಲಿರುವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಉಡುಪರು ತಿಳಿಸಿದರು.

    ಪ್ರತಿಭಾವಂತ ಕವಿಯಾಗಿ, ಸಾಹಿತಿಯಾಗಿ ಚಿಂತಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಡಾ. ವಸಂತಕುಮಾರ ಪೆರ್ಲ ಅವರು ಸಾಹಿತ್ಯದ ಜೊತೆಗೆ ಪತ್ರಿಕೆ, ರೇಡಿಯೋ, ಟಿ. ವಿ. ಮುಂತಾದ ಸಮೂಹ ಮಾಧ್ಯಮಗಳಲ್ಲಿ ಹಾಗೂ ರಂಗಭೂಮಿ, ಸಿನಿಮಾ ಕ್ಷೇತ್ರಗಳಲ್ಲೂ ಪರಿಣಿತರು. ಒಳ್ಳೆಯ ವಾಗ್ಮಿ ಮತ್ತು ವಿದ್ವಾಂಸರೆಂದು ಗುರುತಿಸಲ್ಪಟ್ಟವರು. ಕನ್ನಡ, ತುಳು ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಸಾಹಿತ್ಯ ರಚನೆ ಮಾಡುತ್ತಿರುವ ಡಾ. ಪೆರ್ಲರ ಕವನಗಳು ಮಲಯಾಳಂ, ತಮಿಳು, ತೆಲುಗು, ಹಿಂದಿ, ಪಂಜಾಬಿ, ನೇಪಾಲಿ ಹಾಗೂ ಇಂಗ್ಲಿಷ್ ಭಾಷೆಗೆ ಅನುವಾದವಾಗಿವೆ.

    ಮೈಸೂರು ವಿ. ವಿ. ಯಿಂದ ಕನ್ನಡ ಎಂ. ಎ. ಪದವಿ ಪಡೆದ ಬಳಿಕ ’ಕನ್ನಡ ಹವ್ಯಾಸಿ ರಂಗಭೂಮಿಯಲ್ಲಿ ಜಾನಪದ ಒಳನೋಟಗಳು’ ಎಂಬ ವಿಷಯದ ಬಗ್ಗೆ ಪ್ರೌಢ ಪ್ರಬಂಧ ರಚಿಸಿ ಮೈಸೂರು ವಿ.ವಿ.ಯಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಸುಮಾರು ಮೂವತ್ತು ವರ್ಷಗಳ ಕಾಲ ಮಂಗಳೂರು ಸಹಿತ ಆಕಾಶವಾಣಿಯ ವಿವಿಧ ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ ನಿರ್ದೇಶಕರಾಗಿ ಇತ್ತೀಚೆಗೆ ನಿವೃತ್ತರಾಗಿದ್ದಾರೆ.

    ಕಾವ್ಯ, ಕಥೆ, ಕಾದಂಬರಿ, ವಿಮರ್ಶೆ, ಸಂಶೋಧನೆ, ಸಂಪಾದನೆ, ವ್ಯಕ್ತಿಚಿತ್ರ, ಚಾರಣ, ಅಂಕಣಸಾಹಿತ್ಯ, ಅನುವಾದ ಮೊದಲಾದ ಪ್ರಕಾರಗಳಲ್ಲಿ ಸುಮಾರು ಐವತ್ತರಷ್ಟು ಮೌಲಿಕ ಕೃತಿರಚನೆ ಮಾಡಿದ್ದಾರೆ. ಮಾತಿನಾಚೆಯ ಮೌನ, ಹುತ್ತದೊಳಗಿನ ಹಾವು, ಕೋಟಿಲಿಂಗ, ರಂಗಸ್ಥಳ, ಒಡ್ಡೋಲಗ ಮೊದಲಾದವು ಅವರ ಪ್ರಸಿದ್ಧ ಕವನ ಸಂಕಲನಗಳು. ಅಭ್ಯಾಸ, ಕಾಡಾನೆಗಳ ದವಡೆಯಲ್ಲಿ, ವರ್ತಮಾನ, ಏರುತ್ತೇರುತ್ತ ಶಿಖರ ಮೊದಲಾದವು ಅವರ ಪ್ರಸಿದ್ಧ ಗದ್ಯಕೃತಿಗಳು.

    Click here

    Click here

    Click here

    Call us

    Call us

    ರಾಷ್ಟ್ರಾದ್ಯಂತ ಹಲವು ಸಭೆ ಸಮಾರಂಭಗಳಲ್ಲಿ ಮತ್ತು ಕಮ್ಮಟಗಳಲ್ಲಿ ಕನ್ನಡ ಹಾಗೂ ತುಳು ಭಾಷೆಯನ್ನು ಪ್ರತಿನಿಧಿಸಿದ್ದಾರೆ. ಹತ್ತಾರು ಪ್ರಶಸ್ತಿ ಬಹುಮಾನಗಳನ್ನು ಪಡೆದುಕೊಂಡಿರುವ ಅವರು ಸರಕಾರದ ಹಲವು ಸಮಿತಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳೂರು ತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ. ಮುಖ್ಯವಾಗಿ ಸಾವಿರಾರು ಮಂದಿ ಬರಹಗಾರರನ್ನು ಗುರುತಿಸಿ, ಬೆನ್ನು ತಟ್ಟಿ ಬೆಳೆಸಿ ಪ್ರೋತ್ಸಾಹಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    06/07/2026

    ಡಾ‌. ಪ್ರದೀಪ್ ಕೆಂಚನೂರು ಅವರಿಗೆ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

    25/06/2026

    ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ

    25/06/2026
    Leave A Reply Cancel Reply

    twelve + 7 =

    Call us

    Click Here

    Call us

    Call us

    Call us
    Highest Viewed Recently
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.