Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹತ್ತು ದಿನದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಮಸ್ಯೆ ಬಗೆಹರಿಸಿ: ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ಸೂಚನೆ
    ಉಡುಪಿ ಜಿಲ್ಲೆ

    ಹತ್ತು ದಿನದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಮಸ್ಯೆ ಬಗೆಹರಿಸಿ: ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಜು.8:
    ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ರಸ್ತೆ ಮೂಲಭೂತ ಸಮಸ್ಯೆಗಳನ್ನು ಹತ್ತು ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.

    Click Here

    Call us

    Click Here

    ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಗಳಿಗೂ ಸಹ ಗೈರು ಹಾಜರಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮತ್ತು ಇತರೆ ಕಾರ್ಯಗಳನ್ನು ಸುಗಮವಾಗಿ ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳ ಕುರಿತು ನೀಡಿರುವ ಎಲ್ಲಾ ಸಮಸ್ಯೆಗಳನ್ನು ಹತ್ತು ದಿನದ ಒಳಗೆ ಸಂಪೂರ್ಣವಾಗಿ ಬಗೆ ಹರಿಸಿ, ಈ ಸಮಸ್ಯೆಗಳನ್ನು ಸರಿಪಡಿಸಿದ ದಿನಾಂಕ ಮತ್ತು ಸಮಯವನ್ನು ಒಳಗೊಂಡ ಕುರಿತು ಛಾಯಾಚಿತ್ರಗಳು ಹಾಗೂ ವರದಿಯನ್ನು ಸಲ್ಲಿಸಿ, ಮುಂದಿನ ಸಭೆಗೆ ಹಾಗೂ ಜಿಲ್ಲಾಡಳಿತ ಸೂಚಿಸುವ ಎಲ್ಲಾ ಸಭೆಗಳಿಗೆ ಕಡ್ಡಾಯವಾಗಿ ಹಾಜರಿರುವಂತೆ ಎಚ್ಚರಿಕೆ ನೀಡಿದರು.

    ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ತೊಂದರೆ ಇರುವ ಅಡೆತಡೆಗಳನ್ನು ತಕ್ಷಣವೇ ಸರಿಪಡಿಸಬೇಕು. ತುರ್ತು ಅಗತ್ಯವಿರುವೆಡೆಗಳಲ್ಲಿ ತಕ್ಷಣವೇ ಬೀದಿ ದೀಪಗಳನ್ನು ಅಳವಡಿಸಬೇಕು. ಹೆದ್ದಾರಿ ಪಕ್ಕದಲ್ಲಿ ನೀರು ಹರಿಸಲು ಮತ್ತು ಸಂಚಾರಕ್ಕೆ ತಡೆ ಉಂಟು ಮಾಡುವ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು. ಪ್ಲೈ ಓವರ್ಗಳ ಮೇಲೆ ನೀರು ನಿಲ್ಲದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

    ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ, ಸಾವು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಹೆದ್ದಾರಿಯ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

    ಹೆದ್ದಾರಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಜಿಲ್ಲಾಡಳಿತ ಸೂಚಿಸುವ ಕಾಲಮಿತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು. ಕುಂದಾಪುರದ ಸಂಗಮ್ ಜಂಕ್ಷನ್ನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ಹರಿದುಹೋಗಲು ವ್ಯವಸ್ಥೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಬೀದಿ ದೀಪದ ವ್ಯವಸ್ಥೆ ಮಾಡಬೇಕು. ಸಾಲಿಗ್ರಾಮ ಬಳಿಯ ಸರ್ವಿಸ್ ರಸ್ತೆ ಕಾಮಗಾರಿ ಸೇರಿದಂತೆ ಬಾಕಿ ಇರುವ ಎಲ್ಲಾ ಅಪೂರ್ಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಮಳೆ ನಿಂತ ಕೂಡಲೇ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    Click here

    Click here

    Click here

    Click Here

    Call us

    Call us

    ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ದಾಖಲಿಸಿ ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಬೇಕು. ಇದಕ್ಕಾಗಿ ದೂರು ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಅದರಲ್ಲಿ ದೂರುಗಳಿಗೆ ಸಂಬಂಧಪಟ್ಟ ಎಲ್ಲಾ ವಿವರಗಳನ್ನು ದಾಖಲಿಸಬೇಕು. ನಿಗದಿತ ಅವಧಿಯೊಳಗೆ ಸಮಸ್ಯೆಗಳನ್ನು ಬಗೆಹರಿಸದ ಸಿಬ್ಬಂದಿಗಳ ವೇತನ ಮತ್ತು ಭತ್ಯೆಗಳನ್ನು ತಡೆ ಹಿಡಿಯುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

    ಜಿಲ್ಲೆಯಲ್ಲಿ ಈಗಾಗಲೇ ಕೈಗೊಂಡಿರುವ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಗಳಿಗೆ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಗಳಿಂದ ಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಿದರು.

    ಸಭೆಯಲ್ಲಿ ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ನವಯುಗ ಮತ್ತು ಐಆರ್ಬಿ ಯ ಇಂಜನಿಯರ್ ಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    12 − eight =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.