ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿದ ಬೈಂದೂರು ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ರೂ.50,000 ಬಹುಮಾನ ಘೋಷಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.
ಬೈಂದೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚಿನ್ನಾಭರಣ ಕಳವು ಪ್ರಕರಣ ಹಾಗೂ ಕಾರಿನೊಂದಿಗೆ ವ್ಯಕ್ತಿಯೊನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡವನ್ನು ರಚಿಸಿ ಕ್ಷಿಪ್ರವಾಗಿ ಪ್ರಕರಣ ಭೇದಿಸಲಾಗಿದೆ. ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಐಜಿಪಿ ಮೆಚ್ಚುಗೆ ಸೂಚಿಸಿರುವುದಾಗಿ ತಿಳಿಸಿದರು.
ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಪ್ರಕರಣದ ತನಿಕೆ ಮುಂದುವರಿದಿದ್ದು, ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು. ಬೈಂದೂರು ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತೆರೆದಿರುವ ಅಂಗಡಿಗಳ ಬಗ್ಗೆ ಮಾಹಿತಿ ಇದ್ದು, ಇಲ್ಲಿನ ಪಟ್ಟಣ ಪಂಚಾಯತ್ ಮಾಡುವ ತೆರವು ಕಾರ್ಯಾಚರಣೆಗೆ ಸಹಕಾರಿ ನೀಡುವುದಾಗಿ ತಿಳಿಸಿದರು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ., ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಬೈಂದೂರು ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್, ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ವಿನಯ್ ಕೊರ್ಲಹಳ್ಳಿ ಈ ಸಂದರ್ಭ ಇದ್ದರು.
ಪಶ್ಚಿಮ ವಲಯ ಐಜಿಪಿ ಭೇಟಿ:
ಬೈಂದೂರು ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಕರಣವನ್ನು ಭೇದಿಸಿದ ಬೈಂದೂರು ಪೊಲೀಸ್ ತಂಡಕ್ಕೆ ರೂ.50,000 ಬಹುಮಾನವನ್ನು ಘೋಷಿಸಿ ತೆರಳಿದ್ದಾರೆ.
ಇದನ್ನೂ ಓದಿ:
► ಬೈಂದೂರು: ಕಾರಿಗೆ ಬೆಂಕಿ ಹಚ್ಚಿ ಮೇಸ್ತ್ರಿಯ ಕೊಲೆ? ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು – https://kundapraa.com/?p=60527.
► ಬೈಂದೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿ – ಕಾರು ಪತ್ತೆ – https://kundapraa.com/?p=60500 .
► ನಿದ್ರೆ ಮಾತ್ರೆ ತಿನ್ನಿಸಿ ಕಾರು ಸಹಿತ ಬೆಂಕಿ ಹಚ್ಚಿ ಕೊಲೆ, ನಾಲ್ವರು ವಶಕ್ಕೆ. ಒಂದೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು – https://kundapraa.com/?p=60568 .