ಸರಕಾರಿ ಕಛೇರಿಯಲ್ಲಿ ಖಾಸಗಿ ವ್ಯಕ್ತಿ ಫೋಟೋ ಅಥವಾ ವಿಡಿಯೋ ಚಿತ್ರೀಕರಣಕ್ಕೆ ನಿಷೇಧ ಹೇರಿದ ರಾಜ್ಯ ಸರಕಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವು ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವುದರ ಜೊತೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಕಚೇರಿಯ ಒಳಗಡೆ ಫೊಟೋ ಹಾಗೂ ವಿಡಿಯೋಗಳನ್ನು ಶೂಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಇದು ಸರ್ಕಾರಿ ಸಿಬ್ಬಂದಿ ಇನ್ನೂ ಮುಖ್ಯವಾಗಿ ಮಹಿಳಾ ಸಿಬ್ಬಂದಿಗೆ ಇರಿಸು ಮುರಿಸು ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದರು.

Call us

Click Here

ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಸಂದರ್ಭದಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಶೂಟ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯದ ಪ್ರತಿಯೊಂದು ಸರ್ಕಾರಿ ಕಚೇರಿಗಳು ಅಂದರೆ ಗ್ರಾಮ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಈ ಆದೇಶ ಪಾಲನೆಯಾಗಲಿದೆ.

ಸರಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂಬ ಆರೋಪ ಹಿಂದಿನಿಂದಲೂ ಇದ್ದು, ಸಾರ್ವಜನಿಕರು ಪೋಟೋ ಹಾಗೂ ವಿಡಿಯೋ ತೆಗೆಯಲು ಅವಕಾಶ ಇದ್ದುದರಿಂದ ಕೆಲವೆಡೆ ಸರಕಾರಿ ಅಧಿಕಾರಿಗಳು ಸ್ವಲ್ಪಮಟ್ಟಿಗಾದರೂ ಹೆದರುತ್ತಿದ್ದರು. ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಸರಕಾರದ ಈ ಹೊಸ ಆದೇಶ ಸಮಂಜಸವಾದುದಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇನ್ನು ಈ ಆದೇಶದಿಂದ ಅನಗತ್ಯವಾಗಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ತಪ್ಪಲಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೋರ್ವರು ಹೇಳಿಕೊಂಡಿದ್ದಾರೆ.

► ಪೊಟೋ-ವಿಡಿಯೋ ಚಿತ್ರೀಕರಣ ನಿಷೇಧ ಆದೇಶ ಹಿಂಪಡೆದ ರಾಜ್ಯ ಸರಕಾರ – https://kundapraa.com/?p=60628 .

Leave a Reply