ಕಂಬದಕೋಣೆ: ಬೈಕ್ ಸ್ಕಿಡ್ ಆಗಿ ಇಬ್ಬರು ವಿದ್ಯಾರ್ಥಿಗಳ ಸಾವು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಕಂಬದಕೋಣೆ ಎನ್.ಹೆಚ್-66ರ ಸೇತುವೆ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು, ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.ಆಂಧ್ರಪ್ರದೇಶ ಮೂಲದ ಆದಿತ್ಯ ರೆಡ್ಡಿ (18) ಹಾಗೂ ಕಲ್ಲೂರು ತರುಣ್ ಕುಮಾರ ರೆಡ್ಡಿ (19) ಮೃತ ದುರ್ದೈವಿಗಳು.

Call us

Click Here

ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳಾದ ಇವರು, ಮಣಿಪಾಲದಲ್ಲಿ ರೆಂಟ್ ಬೈಕ್ ಪಡೆದು ಮುರುಡೇಶ್ವರಕ್ಕೆ ತೆರಳುತ್ತಿದ್ದ ಸಂದರ್ಭ ಕಂಬದಕೋಣೆಯಲ್ಲಿ ಈ ಘಟನೆ ನಡೆದಿದೆ.

ಗಂಗೊಳ್ಳಿಯ 24×7 ಆಪತ್ಭಾಂಧವ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ನೆರವಾದರು. ಇವರಿಗೆ ಪ್ರದೀಪ್ ಖಾರ್ವಿ ಉಪ್ಪುಂದ, ಚಾಲಕ ಕೃಷ್ಣ, ನದಿಮ್ ಸಹಕರಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply