ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನೆರೆಹಾವಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ, ಕಂಡಿಕೇರೆ, ನಾಡ ಗ್ರಾಮದ ಚಿಕ್ಕಳ್ಳಿ ಭಾಗಗಳಿಗೆ ಉದ್ಯಮಿ ಹಾಗೂ ಸಮಾಜ ಸೇವಕ ನಿತಿನ್ ನಾರಾಯಣ್ ಶನಿವಾರ ಭೇಟಿ ನೀಡಿದರು.
ಈ ಸಂದರ್ಭ ಅವರು ದೂಣಿಯ ಮೂಲಕ ತೆರಳಿ 100ಕ್ಕೂ ಅಧಿಕ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್‌ಗಳನ್ನು ಹಾಗೂ ನೆರೆಯ ಸಂದರ್ಭ ಸೇವೆಯಲ್ಲಿ ತೊಡಗಿಕೊಳ್ಳುವ ಸ್ಥಳೀಯ ಯುವಕರಿಗೆ ಸೇಫ್ ಜಾಕೆಟ್‌ಗಳನ್ನು ವಿತರಿಸಿದರು.