ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಜು.23: ತಾಲೂಕಿನ ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 10ನೇ ತರಗತಿಯ ವ್ಯಾಸಂಗ ಮಾಡುತ್ತಿರುವ ಬಿಜೂರು ಗ್ರಾಮದ ಬವಳಾಡಿಯ ಲತಾಳನ್ನು ಬಿಜೂರು ಗ್ರಾಮ ಪಂಚಾಯತ್, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬವಳಾಡಿ ಸ.ಹಿ.ಪ್ರಾ. ಶಾಲೆ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು.
ಬವಳಾಡಿಯ ಚನ್ನಮ್ಮ ಅವರ ಪುತ್ರಿಯಾದ ಲತಾ ಬಿಜೂರು ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ಪ್ರವೇಶಿಸುತ್ತಿರುವ ಕೊರಗ ಸಮುದಾಯದ ಪ್ರಥಮ ವಿದ್ಯಾರ್ಥಿನಿಯಾಗಿದ್ದಾಳೆ.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಿಕ್ಷಣ ಸಂಯೋಜಕ ಚಂದ್ರ ದೇವಾಡಿಗ ಅವರು ಕೊರಗ ಸಮುದಾಯವನ್ನು ಕುರಿತು ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು. ಬಿಜೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಪಿಡಿಓ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗ ಶಾಲಾ ಎಸ್ಡಿಎಂಸಿ ಅಧ್ಯಕ್ಷರು, ಶಿಕ್ಷಕ ವೃಂದ ಹಾಗೂ ಕೊರಗ ಸಮುದಾಯದ ಮುಖಂಡ ಲಕ್ಷ್ಮಣ ಕೊರಗ ಉಪಸ್ಥಿತರಿದ್ದರು.