ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು: ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಫೋಕ್ಸೋ ಕಾಯ್ದೆ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆ ಹಾಗೂ ಮಕ್ಕಳ ಸಹಾಯವಾಣಿಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು.

Call us

Click Here

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು‌ ಹಾಗೂ ಪ್ರಾಂಶುಪಾಲರಾದ ಗಣೇಶ‌ ಮೊಗವೀರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕಂಡ್ಲೂರು ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕರಾದ ನಿರಂಜನ್ ಅವರು ಸೈಬರ್ ಕ್ರೈಮ್ ಹಾಗೂ‌ ಸಾಮಾಜಿಕ ಜಾಲತಾಣಗಳ ಕುರಿತು ಮಾಹಿತಿ‌ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾದ ಮಹೇಶ ದೇವಾಡಿಗ ಅವರು ಬಾಲ್ಯ ವಿವಾಹ ತಡೆ ಕುರಿತು ಮಾಹಿತಿ ನೀಡಿದರು. 1098 ಮಕ್ಕಳ ಸಹಾಯವಾಣಿ ಕೇಂದ್ರ ಸಂಯೋಜಕಿ‌ ಜ್ಯೋತಿ ‌ಇವರು ಮಕ್ಕಳ ಸಹಾಯವಾಣಿ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಮಾಹಿತಿ ನೀಡಿದರು.

ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಆಡಳಿತಾಧಿಕಾರಿಗಳು ಹಾಗೂ‌ ಕಾಲೇಜಿನ‌ ದೈಹಿಕ ಶಿಕ್ಷಣ ನಿರ್ದೇಶಕರಾಗಿರು‌ವ ಪ್ರದೀಪ್ ಕುಮಾರ್ ಶೆಟ್ಟಿ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಅನುಷಾ ಉಪಸ್ಥಿತರಿದ್ದರು‌.

ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಅವರು ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Leave a Reply