ಬೈಂದೂರು ವಲಯ ಧ್ವನಿ ಮತ್ತು ಬೆಳಕು ಸಂಯೋಜಕರ ಸಂಘಟನೆಯ ದಶಮಾನೋತ್ಸವ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ವೃತ್ತಿಗೆ ಅನುಗುಣವಾಗಿ ಸಂಘಟನೆಗಳ ಸದಸ್ಯರ ವೃತ್ತಿ ಕೌಶಲ್ಯ ಹೆಚ್ಚಿಸಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ಅತ್ಯಗತ್ಯ. ಧ್ವನಿ – ಬೆಳಕು ವೃತ್ತಿ ನಿರತರು ಅಪಾಯದ ನಡುವೆ ಕೆಲಸ ಮಾಡಬೇಕು. ಅವರಲ್ಲಿ ವೃತ್ತಿ ಕೌಶಲ್ಯಗಳಿದ್ದರೆ ಅದರ ಬಗೆಗೆ ಮುನ್ನೆಚ್ಚರಿಕೆ ವಹಿಸಬಹುದು ಮತ್ತು ಗ್ರಾಹಕರ ನಿರೀಕ್ಷೆಯ ಮಟ್ಟದ ಸೇವೆ ನೀಡಬಹುದು ಎಂದು ರಾಜ್ಯ ವೈದ್ಯ ಸಂಘ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಸುಬ್ರಹಣ್ಯ ಭಟ್ ಹೇಳಿದರು.

Call us

Click Here

ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಭಾನುವಾರ ಬೈಂದೂರು ವಲಯದ ಧ್ವನಿ ಮತ್ತು ಬೆಳಕು ಸಂಯೋಜಕರ ಸಂಘಟನೆಯ ದಶಮಾನೋತ್ಸವ ಸಮಾರಂಭ ಹಾಗೂ 11ನೇ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಯಾವುದೇ ಕಾರ್ಯಕ್ರಮದ ಯಶಸ್ಸಿನ ಹಿಂದೆ ಈ ಸಂಘಟನೆ ಕೆಲಸ ಮಾಡುತ್ತದೆ. ಧ್ವನಿ ಇಲ್ಲದವರ ಧ್ವನಿಯಾಗುವ ಹಾಗೂ ವೇದಿಕೆಯಲ್ಲಿರುವವರ ಧ್ವನಿಯನ್ನು ಸಮಾಜಕ್ಕೆ ತಲುಪಿಸುವ ಕೆಲಸ ಮಾಡುತ್ತಿದೆ. ಹಾಗಂತ ಮೆಹಂದಿ, ಧಾರ್ಮಿಕ ಹಾಗೂ ಇತರೇ ಉತ್ಸವಗಳಲ್ಲಿ ಹೆಚ್ಚು ಧ್ವನಿ (ಡಿಜೆ ಮೂಲಕ) ಏರಿಸಿದರೂ ಕೂಡ ಇದರಿಂದ ಸಮಾಜಕ್ಕೆ ಸಮಸ್ಯೆಯಾಗುತ್ತದೆ. ಇದರಿಂದ ಹೃದಯ ಕಾಯಿಲೆ ಇರುವವರು, ವಯೋವೃದ್ಧರೂ ಸೇರಿದಂತೆ ಹಲವವರಿಗೆ ತೊಂದರೆಗಳಾಗಬಹುದು. ಅಲ್ಲದೇ ಕಾನೂನಿನಲ್ಲಿಯೂ ಕೂಡ ಇದಕ್ಕೆ ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಪ್ರಜ್ಞಾವಂತರಾದ ತಾವುಗಳು ಈ ನಿಯಮವನ್ನು ಪಾಲಿಬೇಕು ಎಂದು ಒರ್ವ ವೈದ್ಯನ ನೆಲೆಯಲ್ಲಿ ಮನವಿ ಮಾಡುತ್ತಿದ್ದೇನೆ ಎಂದರು.

ಬೈಂದೂರು ವಲಯಾಧ್ಯಕ್ಷ ಶಶಿಧರ ಶೆಣೈ ಅಧ್ಯಕ್ಷತೆವಹಿಸಿದ್ದರು. ವಿವಿಧ ಕ್ಷೇತ್ರದ ನಾಲ್ವರು ಸಾಧಕರನ್ನು ಸನ್ಮಾನಿಸಲಾಯಿತು. ವಲಯದ ಹತ್ತು ಹಿರಿಯ ಸದಸ್ಯರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ದಶಮಾನೋತ್ಸವ ಸಮಿತಿ ಅಧ್ಯಕ್ಷ ಶಿವರಾಜ್ ಮಲ್ಗಾರ್ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. ಕಾರ್ಯದರ್ಶಿ ಯು. ವಿನಾಯಕ ಪ್ರಭು ವರದಿ ಹಾಗೂ ಖಜಾಂಚಿ ಪ್ರಭಾಕರ ಜಿ. ದೇವಾಡಿಗ ಲೆಕ್ಕಪತ್ರ ಮಂಡಿಸಿದರು. ಜಿಲ್ಲೆ ಹಾಗೂ ವಿವಿಧ ವಲಯಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಂಘಟನೆಯ ಜಿಲ್ಲಾಧ್ಯಕ್ಷ ರಾಮಕೃಷ್ಣ ಕುಂದರ್ ಪ್ರಾಸ್ತಾವಿಸಿದರು. ಗಣೇಶ್ ಎಂ. ಪೂಜಾರಿ ಸ್ವಾಗತಿಸಿ, ರಾಜ್ಯ ಸಮಿತಿ ಉಪಾಧ್ಯಕ್ಷ ಹರೇಗೋಡು ಉದಯ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Leave a Reply