ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು: ಕಾರ್ಗಿಲ್ ವಿಜಯ ದಿವಸ್ ಆಚರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ ನಡೆಯಿತು.

Call us

Click Here

ನಿವೃತ್ತ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಅಧಿಕಾರಿ ಜೋಷಿ ಪಿ. ಪಿ. ಅವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾವು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ನೆನಪುಗಳೊಂದಿಗೆ ಯುದ್ಧದ ಕುರಿತಾದ ಸಂಪೂರ್ಣ ಮಾಹಿತಿ ನೀಡಿದರು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷರು ಹಾಗೂ ರಸಾಯನಶಾಸ್ತ್ರ ಉಪನ್ಯಾಸಕರಾಗಿರುವ ಡಾ. ಮಂಜುನಾಥ ಗಾಣಿಗ, ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಜೀವಶಾಸ್ತ್ರ ಉಪನ್ಯಾಸಕರಾಗಿರುವ ಸುನಿಲ್ ಚಿತ್ತಾಲ್, ಆಡಳಿತ ಮಂಡಳಿಯ ಕೋಶಾಧಿಕಾರಿ ಹಾಗೂ ಭೌತಶಾಸ್ತ್ರ ಉಪನ್ಯಾಸಕರಾಗಿರುವ ಕಾರ್ತೀಕೇಯ ಎಮ್. ಎಸ್., ಆಡಳಿತಾಧಿಕಾರಿಗಳು ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾಗಿರುವ ಪ್ರದೀಪ್ ಕುಮಾರ್ ಶೆಟ್ಟಿ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ ಅಭಿಜಿತ್ ಅತಿಥಿಗಳನ್ನು ಪರಿಚಯಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ, ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿರುವ ಹರ್ಷ ವಂದಿಸಿದರು.

Leave a Reply