ಬೈಂದೂರು ಕ್ಷೇತ್ರದಲ್ಲಿ ಬಹುಪಯೋಗಿ ಬಂದರು ನಿರ್ಮಾಣ ಮತ್ತು ಗಂಗೊಳ್ಳಿ-ಕುಂದಾಪುರ ಸೇತುವೆ ಸಂಸದರ ಮನವಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಹುಪಯೋಗಿ ಬಂದರು ನಿರ್ಮಾಣ ಮತ್ತು ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಬಂದರು ಹಡಗು ಮತ್ತು ಜನ ಸಾರಿಗೆ ಸಚಿವರಾದ ಶ್ರೀ ಸರ್ಬಾನಂದ ಸೋನಾವಾಲ ಅವರನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

Call us

Click Here

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಲ್ಟಿ ಪರ್ಪಸ್ ಹಾರ್ಬರ್ (ಬಹುಉಪಯೋಗಿ ಬಂದರು) ಸ್ಥಾಪನೆ ಮಾಡಲು ಕ್ರಮವಹಿಸಲು ಸಂಸದರು ಒತ್ತಾಯಿಸಿದ್ದಾರೆ.

ಗಂಗೊಳ್ಳಿಯಿಂದ ಕುಂದಾಪುರಕ್ಕೆ ಸುಮಾರು 18 ಕಿ.ಮೀ. ಸುತ್ತುಬಳಸಿ ತೆರಳಬೇಕಾಗಿದೆ. ಕುಂದಾಪರ – ಗಂಗೊಳ್ಳಿ ಸೇತುವೆ ನಿರ್ಮಾಣದ ಮನವಿಯನ್ನು ತುರ್ತಾಗಿ ಗಣನೆಗೆ ತೆಗೆದುಕೊಂಡು ಪ್ರಥಮ ಆದ್ಯತೆಯ ಮೇರೆಗೆ ಅನುಮೊದನೆ ದೊರಕಿಸಿಕೊಡಬೇಕೆಂದು ಸಂಸದರು ಒತ್ತಾಯಿಸಿದ್ದಾರೆ.

ಕೇಂದ್ರ ಸಚಿವರು ಎರಡೂ ಪ್ರಸ್ತಾವನೆಯ ಬಗ್ಗೆ ಚರ್ಚಿಸಿ, ಪಿಪಿಪಿ ಮಾದರಿಯಲ್ಲಿ ಬಹುಪಯೋಗಿ ಬಂದರು ನಿರ್ಮಾಣಕ್ಕೆ ಟೆಂಡರ್ ಕರೆಯುವ ತಿಳಿಸಿದ್ದಾರೆ. ಸಾಗರಮಾಲ ಯೋಜನೆಯಡಿ ಗಂಗೊಳ್ಳಿ – ಕುಂದಾಪುರ ಸೇತುವೆ ನಿರ್ಮಾಣದ ಮಾಡುವ ಬಗ್ಗೆ ಸಕಾರಾತ್ಮಕವಾಗಿ ಪರಿಗಣಿಸುವ ಭರವಸೆ ನೀಡಿದ್ದಾರೆ ಮತ್ತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

ಸಭೆಯಲ್ಲಿ ಕೇಂದ್ರ ಸಹಾಯಕ ಸಚಿವರಾದ ಶ್ರೀಪಾದ್ ನಾಯಕ್, ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ್, ಮೂಲಭೂತ ಸೌಕರ್ಯ ಅಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಾಳಾದ ಗೌರವ್ ಗುಪ್ತ ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply