ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ರತ್ತುಬಾಯಿ ಜನತಾ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಬುಧವಾರ ಜರುಗಿತು.
ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಚಿಕ್ಕವಯಸ್ಸಿನಲ್ಲಿ ಕಾಳಜಿ ಮೂಡಿಸಿದರೆ ಪ್ರಕೃತಿ ಮೇಲಾಗುವ ದುಷ್ಪರಿಣಾಮವನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ಆದ್ದರಿಂದ ಗಿಡಗಳನ್ನು ಬೆಳಸಿ ಉಳಿಸೋಣ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಹೆಮ್ಮಾಡಿ ಶ್ರೀ ವಿ.ವಿ.ವಿ ಮಂಡಳಿ ಮಂಡಳಿ ಉಪಾಧ್ಯಕ್ಷ, ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಬೈಂದೂರು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಭಾನುಮತಿ ಬಿ.ಕೆ., ಬೈಂದೂರು ವಲಯದ ರೇಂಜರ್ ಆಗಿರುವ ಸಿದ್ದೇಶ್, ಉಡುಪಿ ವಲಯದ ರೇಂಜರ್ ಚಿದಾನಂದ, ಇಕೋ ಕ್ಲಬ್ ಅಧ್ಯಕ್ಷ ನಿಕೇಶ್, ಶಾಲಾ ಮುಖ್ಯೋಪಾಧ್ಯಾಯಾರಾದ ಆನಂದ ಮದ್ದೂಡಿ ಉಪಸ್ಥಿತರಿದ್ದರು. ಶಿಕ್ಷಕಿ ಚೈತ್ರ ವಂದಿಸಿದರು. ಅಧ್ಯಾಪಕರಾದ ಚಂದ್ರ ಕೆ. ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು