Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರಣಿಕ ಕ್ಷೇತ್ರ: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನ ಮರವಂತೆ
    ಧಾರ್ಮಿಕ ಕೇಂದ್ರ

    ಕಾರಣಿಕ ಕ್ಷೇತ್ರ: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನ ಮರವಂತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಲೇಖನ.
    ಮರವಂತೆ ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿಷ್ಣು ಹಾಗೂ ಶ್ರೀ ವಿಷ್ಣುವಿನ ದಶವತಾರಗಳಲ್ಲಿ ಎರಡು ಮುಖ್ಯ ಅವತಾರಗಳಾದ ಶ್ರೀ ವರಾಹ ಮತ್ತು ಶ್ರೀ ನರಸಿಂಹ ದೇವರು ಈ ಮೂರು ದೇವರ ಮೂರ್ತಿಗಳು ಒಂದೇ ಗರ್ಭಗುಡಿಯಲ್ಲಿ ಸಾಲಾಗಿ ಸ್ಥಾಪಿಸಲ್ಪಟ್ಟಿರುವುದು ಈ ದೇವಾಲಯದ ವೈಶಿಷ್ಟ್ಯ. ಮೂರು ಮೂರ್ತಿಗಳಿಗೆ ಪ್ರತ್ಯೇಕ ಪ್ರವೇಶ ದ್ವಾರಗಳಿದ್ದರೂ ಎಡನಾಳಿ ಮತ್ತು ಮುಖಮಟಂಪ ಮಾತ್ರ ಒಂದೇ. ಮೂರು ದೇವರಿಗೆ ಆಗಮವಿದೆಯಂತೆ ಹಗಲು ಮತ್ತು ರಾತ್ರಿ ಪೂಜೆ ನಡೆಯುತ್ತದೆ. ಭರತ ಭೂಮಿಯಲ್ಲಿನ ಏಳು ವರಾಹ ದೇವಸ್ಥಾನಗಳಲ್ಲಿ ಮರವಂತೆಯ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನವು ಒಂದೇನಿಸಿಕೊಂಡಿದೆ.

    Click Here

    Call us

    Click Here

    ದೇವಳದ ಐತಿಹ್ಯ:
    ಮರವಂತೆ ಧಾರ್ಮಿಕವಾಗಿ ಅತ್ಯಂತ ಪವಿತ್ರವಾದ ಕ್ಷೇತ್ರ. ಗತ ಪೂರ್ವದಲ್ಲಿ ದೇವೇಂದ್ರನು ಗೌತಮ ಮುನಿಯ ಪತ್ನಿ ಅಹಲ್ಯೆಯಲ್ಲಿ ಕಾಮಾತುರನಾಗಿ ಗೌತಮ ಋಷಿಯ ಶಾಪಕ್ಕೀಡಾಗಿ ಭೂಲೋಕದ ಸೌಪರ್ಣಿಕ ನದಿಯ ತಟದಲ್ಲಿ ವಾಸಿಸುತ್ತಿದ್ದನು. ಆ ಸಮಯದಲ್ಲಿ ಗುಹೇಶ್ವರ ಲಿಂಗವನ್ನು ಪೂಜಿಸಿ, ತಪಸ್ಸು ಮಾಡುತ್ತಾ, ಸಮಯ ಕಳೆದ ದೇವೇಂದ್ರನು ಶಾಪ ವಿಮುಕ್ತಿಯಾದ ನಂತರ ಬ್ರಹಸ್ಪತಿ ಆಚಾರ್ಯರ ನೇತೃತ್ವದಲ್ಲಿ ಗಂಗಾಧರನೆಂಬ ಲಿಂಗವನ್ನು ಸ್ಥಾಪಿಸಿ, ದೇವಲೋಕಕ್ಕೆ ಮರಳಿದನು. ಈ ಲಿಂಗವೇ ಶ್ರೀ ಗಂಗಾಧರೇಶ್ವರ ದೇವಸ್ಥಾನ.

    ಪಯಸ್ವಿನಿ ಎಂಬ ನದಿ ತೀರದಲ್ಲಿ ಕ್ಷಾತ್ರ ವಂಶಸ್ಥನಾದ ಅರಸನೊಬ್ಬ ತನ್ನ ವಿಚಾರ ಹೀನತನದಿಂದ ಪುತ್ರ ಹತ್ಯೆಯ ಪಾಪಕ್ಕೊಳಗಾಗಿ ಅದರ ಪ್ರಾಯಶ್ಚಿತಕ್ಕಾಗಿ ವಿವಿಧ ಧಾರ್ಮಿಕ ಕ್ಷೇತ್ರಗಳನ್ನು ಸಂದರ್ಶಿಸಿ, ಗೋಕರ್ಣದಲ್ಲಿ ತಂಗಿರುವಾಗ ಆತನಿಗೆ ಸ್ವಪ್ನ ಸಂದೇಶವಾಗುತ್ತದೆ. ನದಿ ಸಮುದ್ರದ ಸಂಗಮದಲ್ಲಿ ಶ್ರೀ ಗಂಗಾಧರೇಶ್ವರ ದೇವಸ್ಥಾನವಿದೆ. ಆ ದೇವಸ್ಥಾನದ ದಕ್ಷಿಣಕ್ಕೆ ವರಾಹ, ವಿಷ್ಣು, ನಾರಸಿಂಹ ಮೂರು ಮೂರ್ತಿಗಳನ್ನು ವಿಧಿವತ್ತಾಗಿ ಸ್ಥಾಪಿಸುವಂತೆ ಆತನಿಗೆ ದೈವೀ ಪ್ರೇರಣೆ ಆಗುತ್ತದೆ. ಹಾಗೆ ಅರಸನು ಗುಹೇಶ್ವರನನ್ನು ಪೂಜಿಸಿ ವೈವಸ್ವತ ಮನ್ವಂತರದ 28ನೇ ಕಲಿಯುಗದ ಪ್ರಥಮ ಪಾದದಲ್ಲಿ 3300 ವರುಷ ಕಳೆಯುವ ಶುಕ್ಲ ಸಂವತ್ಸರದ ಉತ್ತರಾಯುಣ ವಸಂತ ಋತುವಿನ ವೈಶಾಖ ಶುದ್ಧ ತದಿಗೆ ಪೂರ್ವಾಹ್ನ ಗುರುವಾರ ವೃಷಭ ಲಗ್ನ ಚಂದ್ರ ಕೇಂದ್ರ ಭ್ರಹಸ್ಪತಿ ಇರುವ ಶುಭ ಮುಹೂರ್ತದಲ್ಲಿ ವಿಧಿವತ್ತಾಗಿ ಮೂರ್ತಿತ್ರಯರನ್ನು ಪ್ರತಿಷ್ಠಾಪಿಸಿದನು. ಹೀಗೆ ಒಬ್ಬ ರಾಜನಿಂದ ಪ್ರತಿಷ್ಠಾಪಿಸಲ್ಪಟ್ಟ ಈ ದೇವಸ್ಥಾನವು ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನ ಎಂದು ಹೆಸರು ಪಡೆಯಿತು.

    ಶ್ರೀ ವಿಷ್ಣು ಹಾಗೂ ಶ್ರೀ ವಿಷ್ಣುವಿನ ದಶವತಾರಗಳಲ್ಲಿ ಎರಡು ಮುಖ್ಯ ಅವತಾರಗಳಾದ ಶ್ರೀ ವರಾಹ ಮತ್ತು ಶ್ರೀ ನರಸಿಂಹ ದೇವರು ಈ ಮೂರು ದೇವರ ಮೂರ್ತಿಗಳು ಒಂದೇ ಗರ್ಭಗುಡಿಯಲ್ಲಿ ಸಾಲಾಗಿ ಸ್ಥಾಪಿಸಲ್ಪಟ್ಟಿರುವುದು ಈ ದೇವಾಲಯದ ವೈಶಿಷ್ಟ್ಯ. ಮೂರು ಮೂರ್ತಿಗಳಿಗೆ ಪ್ರತ್ಯೇಕ ಪ್ರವೇಶ ದ್ವಾರಗಳಿದ್ದರೂ ಎಡನಾಳಿ ಮತ್ತು ಮುಖಮಟಂಪ ಮಾತ್ರ ಒಂದೇ. ಮೂರು ದೇವರಿಗೆ ಆಗಮವಿದೆಯಂತೆ ಹಗಲು ಮತ್ತು ರಾತ್ರಿ ಪೂಜೆ ನಡೆಯುತ್ತದೆ. ಈ ದೇವಸ್ಥಾನಕ್ಕೆ ತ್ರಿಕೂಟಚಲ ದೇವಸ್ಥಾನವೆಂಬ ಇನ್ನೊಂದು ಹೆಸರು ಇದೆ. ಭರತ ಭೂಮಿಯಲ್ಲಿನ ಏಳು ವರಾಹ ದೇವಸ್ಥಾನಗಳಲ್ಲಿ ಮರವಂತೆಯ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನವು ಒಂದಾಗಿದೆ.

    ಅಭಾರಿ ಸೇವೆ:
    ಇಲ್ಲಿನ ಇನ್ನೊಂದು ವೈಶಿಷ್ಟವೆಂದರೆ ಅಭಾರಿ ಎಂಬ ದೇವತಾ ಕಾರ್ಯ. ಭಕ್ತರು ಶ್ರೀ ವರಾಹ ದೇವರು ತಮಗೆ ಕಾಲಕಾಲಕ್ಕೆ ಮಳೆ ಬೆಳೆಯನ್ನೊದಗಿಸಿ, ತಮ್ಮನ್ನು ನೆರೆ ಪ್ರವಾಹಗಳಿಂದ ರಕ್ಷಿಸಿದ್ದಕ್ಕೆ ಮತ್ತು ಮೀನುಗಾರರು ತಮ್ಮ ಉದ್ಯಮದಲ್ಲಿ ಲಾಭಗಳಿಸುವಲ್ಲಿ ಯಶಸ್ವಿಯಾಗಿದಕ್ಕೆ ದೇವರಿಗೆ ತಾವು ಋಣಿ ಆಗಿದ್ದೇವೆ ಎಂಬ ತಮ್ಮ ಅಭಾರವನ್ನು, ಕೃತಜ್ನತೆಯನ್ನು ಪ್ರಕಟಪಡಿಸುವ ಹರಕೆಗಳನ್ನು ಸಲ್ಲಿಸುವುದೇ ಅಭಾರಿ. ಇದು ಪ್ರತಿ ಮೂರು ವರ್ಷಗಳಿಗೊಮ್ಮೆ ಗ್ರಾಮಸ್ಥರಿಂದ ನೆರವೇರುತ್ತದೆ. ದೇವರ ಮಹಿಮೆ ಎನ್ನುವುದು ಅಪರಿಮಿತ. ಈ ದೇವಸ್ಥಾನ ಮೀನುಗಾರರ ಇಷ್ಟಾರ್ಥ ಸಿದ್ಧಿ ಸ್ಥಾನವಾಗಿದೆ. ಕುಂದಾಪ್ರ ಡಾಟ್ ಕಾಂ ಲೇಖನ.

    Click here

    Click here

    Click here

    Call us

    Call us

    ವಾರ್ಷಿಕ ಜಾತ್ರೆ:
    ಪ್ರತಿ ವರ್ಷ ಅಷಾಢ ಮಾಸದಲ್ಲಿ ಕರ್ಕಾಟಕ ಅಮಾವಾಸ್ಯೆಯಂದು ಸಂಪನ್ನವಾಗುವ ಈ ಜಾತ್ರೆಯ ದಿನ ನವ ದಂಪತಿಗಳು ಹಾಗೂ ಭಕ್ತ ಸಮೂಹ ನಾನಾ ಮೂಲೆಗಳಿಂದ ದೇವರ ದರ್ಶನ ಪಡೆಯಲು ಭಾರೀ ಉತ್ಸಾಹದಿಂದ ಆಗಮಿಸಿ ತಮ್ಮ ಎಲ್ಲಾ ಕಷ್ಟಗಳನ್ನು ಮರೆತು ದೇವದರ್ಶನ ಪಡೆದು ಧನ್ಯರಾಗುತ್ತಾರೆ. ಮರವಂತೆ ಜಾತ್ರೆ ಕೇವಲ ಕುಂದಾಪುರ ತಾಲೂಕಿಗೆ ಮಾತ್ರವಲ್ಲದೇ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲೊಂದೇನಿಸಿದೆ.

    ಈ ವರಾಹ ದೇವಾಲಯ ಇರುವ ಮಾರಸ್ವಾಮಿ ಎಂದು ಗುರುತಿಸುವ ಮರವಂತೆ ಪ್ರದೇಶವು ಅರಬ್ಬೀಸಮುದ್ರ ಮತ್ತು ಸೌಪರ್ಣಿಕ ನದಿಗಳ ನಡುವಿನ ಕಿರಿದಾದ ಭೂಭಾಗ. ದೇವಾಲಯವು ನದಿಯ ದಂಡೆಯಲ್ಲಿದ್ದರೆ, ಅಲ್ಲಿಂದ ಸಮುದ್ರಕ್ಕಿರುವ ಅಂತರ ಕೇವಲ 150 ಮೀಟರಗಳು. ಸಮುದ್ರ ಮತ್ತು ನದಿಗಳ ನಡುವೆ ರಾಷ್ಟ್ರೀಯ ಹೆದ್ದಾರಿ ಸಾಗುತ್ತದೆ. ಸಮುದ್ರ ಮತ್ತು ನದಿಗಳು ಇಷ್ಟು ನಿಕಟವಾಗಿದ್ದು ಒಂದನ್ನೊಂದು ಸೇರದ ವಿದ್ಯಮಾನ ಒಂದು ಭೌಗೋಳಿಕ ಅಚ್ಚರಿ ಎಂಬಂತೆ ಇದೆ. ಸುತ್ತಲಿನ ಹಸಿರು ಮತ್ತು ದೂರದ ಸಹ್ಯಾದ್ರಿಯ ನೋಟ ಮೇಳೈಸಿ ಇಲ್ಲಿ ಸೃಷ್ಠಿಯಾದ ಪ್ರಕೃತಿ ರಮ್ಯನೋಟ ಚಿತ್ತಾಕರ್ಷಕ. ಆ ಕಾರಣದಿಂದ ಮರವಂತೆಗೆ ದೇಶದ ಪ್ರವಾಸೀ ಭೂಪಟದಲ್ಲಿ ಸ್ಥಾನ ದೊರಕಿದೆ/ಕುಂದಾಪ್ರ ಡಾಟ್ ಕಾಂ ಲೇಖನ/

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d