ಸುಸ್ಥಿರ ಪರಿಸರಕ್ಕೆ ಯುವ ಪೀಳಿಗೆಯ ಕೊಡುಗೆ ಅಗತ್ಯ: ಡಾ. ಬಾಲಕೃಷ್ಣ ಮದ್ದೋಡಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಂಪ್ಯೂಟಿಂಗ್ ತಂತ್ರಜ್ಞಾನದಲ್ಲಿ ಯುವಕರು ತಾವು ಬೆಳೆದ ಪರಿಸರವನ್ನು ಮರೆಯಬಾರದು. ದೇಶ ಎದುರಿಸುತ್ತಿರುವ ಪ್ರತಿಯೊಂದು ಪರಿಸರ ಸಮಸ್ಯೆಗೂ ನಾವೇ ಪರಿಹಾರವಾಗಬೇಕು. ಎನ್ಎಸ್ಎಸ್ ಸ್ವಯಂಸೇವಕರು ಆರೋಗ್ಯವಂತ ಸಮುದಾಯಕ್ಕಾಗಿ ನಮ್ಮ ಪರಿಸರಕ್ಕೆ ಸೇವೆ ಸಲ್ಲಿಸಲು ಪ್ರತಿಜ್ಞೆ ಮಾಡಬೇಕು ಎಂದು ಎಂಐಟಿ ಮಣಿಪಾಲ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಮದ್ದೋಡಿ ಹೇಳಿದರು.

Call us

Click Here

ಅವರು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಪರಿಸರ ಜಾಗೃತಿ ಮತ್ತು ಜಲ ಸಂರಕ್ಷಣೆ ಕಾರ್ಯಕ್ರಮದ ಕುರಿತು ಮಾತನಾಡಿದರು.

ಎನ್ ಎಸ್ ಎಸ್ ಘಟಕ 1 ಮತ್ತು 2ರ ಕಾರ್ಯಕ್ರಮ ಅಧಿಕಾರಿ ಪ್ರೊ. ರಾಘವೇಂದ್ರ ಗುಡಿಗಾರ್ ಅವರು ಪರಿಸರ ನಿರ್ಮಾಣ ಚಟುವಟಿಕೆಗಳ ಬಗ್ಗೆ ಯುವಜನರಿಗೆ ಶಿಕ್ಷಣ ನೀಡಲು ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಗಣಿತ ತಜ್ಞ ಪ್ರೊ. ಉದಯ್ ಎಂ.ಪಿ ಮತ್ತು ಪ್ರೊ. ಹರೀಶ್ ಕೋಟ್ಯಾನ್ ಉಪಸ್ಥಿತರಿದ್ದರು.

ಸುಮಾರು 120 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿ ಮುಖಂಡ ರೋಶನ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

Leave a Reply