Kundapra.com ಕುಂದಾಪ್ರ ಡಾಟ್ ಕಾಂ

ಕಾಮನ್ ವೆಲ್ತ್ ಕ್ರೀಡಾಕೂಟ: ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಗುರುರಾಜ ಪೂಜಾರಿಗೆ ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕುಂದಾಪುರ ಚಿತ್ತೂರಿನ ಗುರುರಾಜ ಪೂಜಾರಿ ಕಂಚಿನ ಪದಕ ಗೆಲ್ಲುವ ಮೂಲಕ ಕ್ರೀಡಾಕ್ಷೇತ್ರದಲ್ಲಿ ರಾಷ್ಟ್ರದ ಕೀರ್ತಿ ಪತಾಕೆ ಹಾರಿಸಿದ್ದಾರೆ.

2018ರಲ್ಲಿ ಗೋಲ್ಡ್ ಕೋಸ್ಟ್’ನಲ್ಲಿ ನಡೆದ 21ನೇ ಕಾಮನ್ ವೆಲ್ತ್ ಗೇಮ್ಸ್ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ಭಾರತದ ಪದಕಗಳ ಭೇಟೆ ಆರಂಭ ದೊರಕಿಸಿಕೊಟ್ಟಿದ್ದರು. ಚಿತ್ತೂರು ಗ್ರಾಮದ ಜಡ್ಡು ಮಹಾಬಲ ಪೂಜಾರಿ ಹಾಗು ಪದ್ದು ದಂಪತಿಗಳ ಆರು ಮಕ್ಕಳಲ್ಲಿ ಐದನೇಯವರಾದ ಗುರುರಾಜಗೆ ಓದಿನಷ್ಟೇ ಕ್ರೀಡೆಯಲ್ಲಿಯೂ ಆಸಕ್ತಿ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಕಲಿಯುತ್ತಿದ್ದ ಸಂದರ್ಭದಲ್ಲಿ ರ್ವೆಸ್ಲಿಂಗ್’ನಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದ ಗುರುರಾಜ್ಗೆ ಸುಕೇಶ್ ಶೆಟ್ಟಿ ಅವರು ತರಬೇತಿ ನೀಡಿದ್ದರು.

ಮುಂದೆ ಪದವಿ ವ್ಯಾಸಂಗಕ್ಕಾಗಿ ಉಜಿರೆಯ ಎಸ್.ಡಿ.ಎಂ ಕಾಲೇಜು ಸೇರಿದ ಬಳಿಕ ಗುರುರಾಜ್ ಬದುಕಿಗೊಂದು ತಿರುವು ದೊರೆತಿತ್ತು. ಈ ಅವಧಿಯಲ್ಲಿ ಎಂ. ರಾಜೇಂದ್ರ ಪ್ರಸಾದ್ ವೇಯ್ಡ್ ಲಿಫ್ಟಿಂಗ್ ತರಬೇತಿ ನೀಡಿ ಕ್ರೀಡಾ ಕ್ಷೇತ್ರದಲ್ಲಿ ಮುಂದುವರಿಯುವಂತೆ ಪ್ರೋತ್ಸಾಹಿಸಿದರು. ಗುರುರಾಜ್ ಎಸ್.ಡಿ.ಎಂ ಕ್ರೀಡಾ ತರಬೇತಿ ಸಂಸ್ಥೆಯ ಕೋಚ್ ರಾಜೇಂದ್ರ ಪ್ರಸಾದ್ ಅವರ ಮೂಲಕ ಮೂಲಕ ನಿರಂತರವಾಗಿ ತರಬೇತಿ ಪಡೆದರು. ಅಲ್ಲಿಂದೀಚೆಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯುತ್ತಲೇ ಬಂದಿರುವ ಗುರುರಾಜ್ ಸೌತ್ ಏಷ್ಯನ್ ಗೇಮ್ಸ್ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನ, 2018ರಲ್ಲಿ ಗೋಲ್ಡ್ ಕೋಸ್ಟ್’ನಲ್ಲಿ ನಡೆದ 21ನೇ ಕಾಮನ್ ವೆಲ್ತ್ ಗೇಮ್ಸ್ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಗೆದ್ದು ಹೊಸ ಭರವಸೆ ಮೂಡಿಸಿದ್ದರು. ಅವರ ಸಾಧನೆಗೆ ಏಲಕವ್ಯ ಪ್ರಶಸ್ತಿ ಕೂಡ ಸಂದಿತ್ತು.

ಕಂಚಿನ ಪದಕ ಗೆದ್ದಿರುವ ಗುರುರಾಜ ಪೂಜಾರಿ ಅವರಿಗೆ ರಾಜ್ಯ ಕ್ರೀಡಾ ಸಚಿವ ಡಾ. ನಾರಾಯಣ ಗೌಡ ರೂ.8 ಲಕ್ಷದ ನಗದು ಪುರಸ್ಕಾರವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ:
► ಕುಂದಾಪುರ ಚಿತ್ತೂರಿನ ಗುರುರಾಜ್ ಪೂಜಾರಿಗೆ ಏಕಲವ್ಯ ಪ್ರಶಸ್ತಿ – https://kundapraa.com/?p=27689 .
► ಕಾಮನ್ವೆಲ್ತ್ ಗೇಮ್ಸ್: ವೆಯ್ಟ್ ಲಿಫ್ಟಿಂಗ್’ನಲ್ಲಿ ಬೆಳ್ಳಿ ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ – https://kundapraa.com/?p=28094 .
► ಕಾಮನ್‌ವೆಲ್ತ್ ವೇಯ್ಟ್ ಲಿಫ್ಟಿಂಗ್: ಕುಂದಾಪುರ ಗುರುರಾಜ್ ಪೂಜಾರಿಗೆ ಚಿನ್ನ – https://kundapraa.com/?p=18493 .

Exit mobile version