ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಂಭಾಸಿ ಕೊರವಡಿ ಸಮೀಪ ನಡೆದಿದೆ.

Call us

Click Here

ಮಣೂರು ಪಡುಕೆರೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಅನನ್ಯ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಸೋಮವಾರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಕ್ಕು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣವೇ ತೆಕ್ಕಟ್ಟೆ ಫ್ರೆಂಡ್ಸ್ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟರಲ್ಲಿಯೇ ವಿದ್ಯಾರ್ಥಿನಿ ಅಸುನೀಗಿದ್ದಳು ಎಂದು ಎನ್ನಲಾಗಿದೆ.

ವಿದ್ಯಾರ್ಥಿನಿಯ ತಂದೆ-ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದು, ಕೊರವಡಿಯಲ್ಲಿ ಅಜ್ಜಿ ಹಾಗೂ ಚಿಕ್ಕಮ್ಮನ ಜೊತೆ ವಿದ್ಯಾರ್ಥಿನಿ ವಾಸವಾಗಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಂದಾಪುರ ಪೊಲೀಸ್ ಸ್ಥಳಕ್ಕೆ ತೆರಳಿ ಮಾಹಿತಿ ಪಡೆದುಕೊಂಡಿದ್ದಾರೆ.

Leave a Reply