ಮಾದಕ ವಸ್ತು ವ್ಯಸನ ಖಿನ್ನತೆಗೆ ಕಾರಣ: ಡಿವೈಎಸ್ಪಿ ಶ್ರೀಕಾಂತ್ ಕೆ.

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ತಾಲೂಕು ಆಡಳಿತ, ಸರಕಾರಿ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಸೋಮವಾರ ಅಂಬೇಡ್ಕರ್ ಭವನದಲ್ಲಿ ನಡೆಯಿತು.

Call us

Click Here

ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಮಾತನಾಡಿ ವ್ಯಸನ ಮುಕ್ತ ಸಮಾಜದ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮತ್ತು ಯುವಕರು ಮುಂದಾಗಬೇಕು. ಕುತೂಹಲಕ್ಕಾಗಿ ಯಾರೊಬ್ಬರೂ ಮಾದಕ ದ್ರವ್ಯ ಬಳಸಬಾರದು. ಮಾನಸಿಕ ಅಸ್ವಸ್ಥರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಂತೆ ಮಾಡುವುದು ನಾಗರಿಕ ಸಮಾಜದ ಕರ್ತವ್ಯ. ಖಿನ್ನತೆಯಿಂದ ಮಾನಸಿಕ ದುಃಖ ಉಂಟಾಗಿ ವ್ಯಕ್ತಿಯ ಸಾಮರ್ಥ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಮಾದಕ ವಸ್ತುಗಳಿಂದ ಮನು?ನ ಅಂಗಾಂಗಳಿಗೆ ತಲುಪಿ ಮನ? ಅದಕ್ಕೆ ಮದ್ಯಪಾನಕ್ಕೆ ದಾಸನು ಆಗುತ್ತಾನೆ. ಮದ್ಯಪಾನ, ಮಾದಕ ದ್ರವ್ಯಗಳ ಸೇವನೆಯಂತಹ ದುಶ್ಚಟಗಳು ಖಿನ್ನತೆಗೆ ಕಾರಣವಾಗಬಹುದು ಹೀಗಾಗಿ ಸಮೂಹ ಸನ್ನಡತೆ ಮೈಗೂಡಿಸಿಕೊಳ್ಳಬೇಕು ಎಂದರು.

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಪಿ ನಾಯಕ್ ಅಧ್ಯಕ್ಷತೆ ವಹಿಸಿದ್ದರು.

ಮಣಿಪಾಲ ಎಂಐಟಿ ಪ್ರಾಧ್ಯಾಪಕ ಪ್ರೋ ಬಾಲಕೃಷ್ಣ ಮದ್ದೋಡಿ ಮಾತನಾಡಿ, ಜೀವನವನ್ನು ರೂಪಿಸುವಾಗ ಸೂಕ್ತ ಮಾರ್ಗದರ್ಶಕರ ಆಯ್ಕೆ ಅತ್ಯಂತ ಅವಶ್ಯಕ, ಆಧುನಿಕ ಜಗತ್ತಿನ ಠಾಕು ಠೀಕುಗಳಿಗೆ ಮೈಮರೆಯದೆ ಸಾಮಾಜಿಕ ಪಿಡುಗುಗಳಿಂದ ಸೂಕ್ತ ಅಂತರ ಕಾಯ್ದುಕೊಂಡಲ್ಲಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದರು.

ಬೈಂದೂರು ಉಪತಶೀಲ್ದಾರ್ ಭೀಮಪ್ಪ, ಬೈಂದೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುರೇಶ್, ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರಾಘವೇಂದ್ರ ಗುಡಿಗಾರ್, ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಕಾರ್ಯಧ್ಯಕ್ಷ ಗಿರೀಶ್ ಬೈಂದೂರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ರಾಮಚಂದ್ರ ಎಸ್. ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹರೀಶ್ ಕೋಟ್ಯಾನ್ ಸ್ವಾಗತಿಸಿದರು. ಉಪನ್ಯಾಸಕರಾದ ಉದಯ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕ ಸುಧಾಕರ್ ಪಿ. ವಂದಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಸುರಭಿ ರಿ. ಬೈಂದೂರು ಸಹಕಾರದೊಂದಿಗೆ, ಶಿಕ್ಷಕರಾದ ಸದಾನಂದ ಬೈಂದೂರು ಹಾಗೂ ಯೋಗೀಶ್ ಬಂಕೇಶ್ವರ ನಿರ್ದೇಶನದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ವ್ಯಸನ ಮುಕ್ತ ಭಾರತ ಬೀದಿ ನಾಟಕ ಪ್ರದರ್ಶನಗೊಂಡಿತು.

Leave a Reply