ವತ್ತಿನಕಟ್ಟೆ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತ, ಲಕ್ಷ್ಮೀ ಹೃದಯ ಹೋಮ ಸಂಪನ್ನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ವ್ರತ, ಸಾರ್ವಜನಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು.

Call us

Click Here

ಇದೇ ಸಂದರ್ಭ ವೇ.ಮೂ. ಚೆನ್ನಕೇಶವ ಗಾಯತ್ರಿಭಟ್ಟ ಆನಗಳ್ಳಿ ಅವರ ನೇತೃತ್ವದಲ್ಲಿ ಲಕ್ಷ್ಮೀ ಹೃದಯ ಹೋಮ ನೆರವೇರಿತು. ಬಳಿಕ ಸಾರ್ವಜನಿಕರಿಗೆ ಮಹಾ ಅನ್ನಸಂತರ್ಪಣೆ ಜರುಗಿತು.

ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಶಂಕರ ಮೊಗವೀರ, ಮಂಜುನಾಥ ಆಚಾರ್ಯ, ಸತ್ಯಪ್ರಸನ್ನ, ಅಣ್ಣಪ್ಪ ಪೂಜಾರಿ (ಪಾತ್ರಿ) ಮೊದಲಾದವರು ಉಪಸ್ಥಿತರಿದ್ದರು.

Leave a Reply