ಮೀನುಗಾರಿಕಾ ದೋಣಿ ಸಮುದ್ರಪಾಲಾದ ಕಳುಹಿತ್ಲು ಪ್ರದೇಶಕ್ಕೆ ಸಚಿವ ಅಂಗಾರ ಭೇಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಹಾನಿಗೊಳಗಾದ ನಾಡದೋಣಿಗಳಿರುವ ಕಳುಹಿತ್ಲು ಪ್ರದೇಶಕ್ಕೆ ಬುಧವಾರ ರಾಜ್ಯ ಮೀನುಗಾರಿಕೆ ಸಚಿವ ಎಸ್. ಅಂಗಾರ ಭೇಟಿ ನೀಡಿದರು.

Call us

Click Here

ಈ ವೇಳ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಶಿರೂರು ಭಾಗದಲ್ಲಿ ಅಧಿಕ ಮಳೆಯಾಗಿರುವುದರಿಂದ ಸಾಕಷ್ಟು ಅವಘಡ ಸಂಭವಿಸಿದೆ. ಕಳುಹಿತ್ಲು ಪ್ರದೇಶದಲ್ಲಿ ದೋಣಿ ಹಾಗೂ ಮೀನುಗಾರಿಕಾ ಸ್ವತ್ತುಗಳು ಸಮುದ್ರಪಾಲಾಗಿದೆ. ಈ ಬಗ್ಗೆ ಅಧಿಕಾರಿಗಳಿಂದ ಸಮಗ್ರ ವರದಿ ಪಡೆದಿದ್ದೇನೆ. ಪ್ರಾಕೃತಿಕ ವಿಕೋಪ ಪರಿಹಾರದಿಂದ ಹೆಚ್ಚಿನ ಅನುದಾನ ನೀಡಲು ಸಾಧ್ಯವಿಲ್ಲದ ಕಾರಣ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಹೆಚ್ಚಿನ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೈಂದೂರು ತಾಲೂಕಿನ ಕೊಡೇರಿ ಬಂದರು ವಿಸ್ತರಣಾ ಕಾಮಗಾರಿ ಶೀಘ್ರ ಆರಂಭ, ಸೀಮೆಎಣ್ಣೆ ಸಮಸ್ಯೆಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಈ ವೇಳೆ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿ.ಪಂ ಸಿಇಓ ಪ್ರಸನ್ನ, ಕುಂದಾಪುರ ಸಹಾಯಕ ಕಮಿಷನರ್ ರಾಜು, ಮೀನುಗಾರಿಕ ಸಹಾಯಕ ನಿರ್ದೇಶಕ ಶಿವಕುಮಾರ್, ಮೀನುಗಾರಿಕ ಸಹಾಯಕ ನಿರ್ದೇಶಕಿ ಸುಮಲತಾ, ಬೈಂದೂರು ತಹಶೀಲ್ದಾರ ಕಿರಣ ಗೌರಯ್ಯ, ಉಪತಹಶೀಲ್ದಾರ ಭೀಮಪ್ಪ ಎಚ್.ಬಿಲ್ಲಾರ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ತಾ.ಪಂ‌‌. ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ, ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ್ ರಾಥೋಡ್, ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ ಖಾರ್ವಿ, ಮೀನುಗಾರ ಮುಖಂಡರಾದ ಜಗನ್ನಾಥ ಮೊಗವೀರ, ನವೀನ್‌ಚಂದ್ರ ಉಪ್ಪುಂದ, ನಾಗರಾಜ ಬಿ.ಎಚ್.ಪಿ, ಉಪ್ಪುಂದ ರಾಣಿಬಲೆ ಮೀನುಗಾರರ ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ, ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಕಳಿಹಿತ್ತು ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಅಜೀಜ್ ಕಳಿಹಿತ್ತು, ಗ್ರಾ.ಪಂ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ ಕರಾವಳಿ, ಮಹ್ಮದ್ ಗೌಸ್, ರವೀಂದ್ರ ಶೆಟ್ಟಿ ಆರಕ್ಕಿ, ಬಾಬು ಮೊಗೇರ್ ಅಳ್ವೆಗದ್ದೆ, ಸುರೇಂದ್ರ ದೇವಾಡಿಗ ತುಳಸಿದಾಸ್ ಮೊಗೇರ್ ಮೊದಲಾದವರು ಹಾಜರಿದರು.

Leave a Reply