ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಿಜೆಪಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಕುಂದಾಪುರ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಗವರೋಜಿ ಹಾಗೂ ಠಾಣಾ ಸಿಬ್ಬಂದಿ ವರ್ಗದವರಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಿದರು.
ಈ ಸಂದರ್ಭ ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸೌರಭಿ ಪೈ, ಜಯಲಕ್ಷ್ಮೀ ಗಾಣಿಗ, ಉಪಾಧ್ಯಕ್ಷೆ ಶ್ವೇತಾ, ನೇತ್ರಾವತಿ ಮಡಿವಾಳ, ಕಾರ್ಯದರ್ಶಿ ರೋಹಿಣಿ ಪೈ, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಆಶಾಲತಾ ನಾಯಕ್, ಪುರಸಭೆ ಅಧ್ಯಕ್ಷರಾದ ವೀಣಾ ಭಾಸ್ಕರ್, ಸದಸ್ಯರಾದ ಶ್ವೇತಾ ಸಂತೋಷ್, ವನಿತಾ ಬಿಲ್ಲವ, ಪುಷ್ಪಾ ಶೇಟ್, ದಿವಾಕರ್ ಕಡ್ಗಿ, ಹಾಲಾಡಿ ಮಹಾಶಕ್ತಿ ಕೇಂದ್ರ ಮ.ಮೋ ಅಧ್ಯಕ್ಷೆ ದೀಪಿಕಾ ಶೆಟ್ಟಿ, ಯುವಮೋರ್ಚಾ ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಕೋಟೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರಾಗಿಣಿ ದೇವಾಡಿಗ, ಸದಸ್ಯರಾದ ಜಯಲಕ್ಷ್ಮೀ ಆಚಾರ್, ವಿಶಾಲಾಕ್ಷಿ, ಪ್ರತಿಮಾ ಚಾತ್ರ, ಸೀಮಿತಾ, ವಿದ್ಯಾ ಖಾರ್ವಿ, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.