ಕುಂದಾಪುರ: ಇತ್ತಿಚಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ಜಿಲ್ಲೆ ಇವರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಹಿರಿಯಡ್ಕ ಇಲ್ಲಿ ನಡೆದ ಜಿಲ್ಲಾ ಮಟ್ಟ ವಾಲಿಬಾಲ್ ಪಂದ್ಯಾಟದಲ್ಲಿ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಕೋಡಿ ಪ್ರಥಮ ಸ್ಥಾನ ಗಳಿಸಿದೆ. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಹಾಜಿ ಮಾಸ್ಟರ್ ಮೆಹಮೂದ್, ನಿರ್ದೇಶಕರಾದ ಪ್ರೊ.ಚಂದ್ರಶೇಖರ ದೋಮ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀ ರವೀಂದ್ರ ಹಾಗೂ ದೈಹಿಕ ಶಿಕ್ಷಕರಾದ ಜೆಫ್ ಸನ್ನಿ ಡಿಸೋಜ ಶುಭ ಹಾರೈಸಿದರು.
ಜಿಲ್ಲಾ ಮಟ್ಟದ ವಾಲಿಬಾಲ್: ಕೋಡಿ ಬ್ಯಾರೀಸ್ ಪ್ರಶಸ್ತಿಯ ಗರಿ
