ಜನತಾ ಪಿಯು ಕಾಲೇಜು ಹಾಗೂ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು.

Call us

Click Here

ಬೈಂದೂರು ಕ್ಷೇತ್ರದ ಮಾಜಿ ಶಾಸಕರು ಹಾಗೂ ಶ್ರೀ.ವಿ.ವಿ.ವಿ ಮಂಡಳಿ (ರಿ) ಅಧ್ಯಕ್ಷರಾದ ಕೆ. ಗೋಪಾಲ ಪೂಜಾರಿ ಅವರು ಧ್ವಜಾರೋಹಣಗೈದು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಂಡು ರಾಷ್ಟ್ರೀಯ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸಮಾರಂಭದ ಮುಖ್ಯ ಅತಿಥಿಯಾಗಿ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಸ್ವಾತಂತ್ರ್ಯದ ಈ ಸಂಭ್ರಮದಲ್ಲಿ ಶಿಕ್ಷಣ ಕ್ಷೇತ್ರದ ಪಾತ್ರದ ಕುರಿತು ಮಾತನಾಡಿದರು.

ಸಮಾರಂಭದಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಶ್ರೀ ವಿ.ವಿ.ವಿ ಮಂಡಳಿಯ ಸದಸ್ಯರಾಗಿರುವ ಶೀನ ಪೂಜಾರಿ, ಜನತಾ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಂದಿ ದೇವಾಡಿಗ, ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿರುವ ರಾಘವೇಂದ್ರ ಕುಲಾಲ್, ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ನ ಪದಾಧಿಕಾರಿಗಳು, ಜನತಾ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಬೋಧಕ,ಬೋಧಕೇತರ ವೃಂದದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಂಜು ಕಾಳಾವರರವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Click here

Click here

Click here

Click Here

Call us

Call us

Leave a Reply