Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ನಾಟಕದ ಏಳು ಅದ್ಭುತ ಅಭಿಯಾನದಲ್ಲಿ ನೀವೂ ಪಾಲ್ಗೊಳ್ಳಿ, ಉಡುಪಿ ಜಿಲ್ಲೆಯ 4 ಅದ್ಭುತಗಳಿಗೆ ಓಟ್ ಮಾಡಿ
    ಉಡುಪಿ ಜಿಲ್ಲೆ

    ಕರ್ನಾಟಕದ ಏಳು ಅದ್ಭುತ ಅಭಿಯಾನದಲ್ಲಿ ನೀವೂ ಪಾಲ್ಗೊಳ್ಳಿ, ಉಡುಪಿ ಜಿಲ್ಲೆಯ 4 ಅದ್ಭುತಗಳಿಗೆ ಓಟ್ ಮಾಡಿ

    Updated:17/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಉಡುಪಿಯ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.
    ಉಡುಪಿ ಜಿಲ್ಲೆಯ ನಾಲ್ಕು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ನಾಲ್ಕು ಸ್ಥಳಗಳಿಗೆ ವೋಟ್ ಮಾಡುವ ಮೂಲಕ ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದಾಗಿದೆ.

    Click Here

    Call us

    Click Here

    ಉಡುಪಿಯ ನಾಮ ನಿರ್ದೇಶನಗಳು :

    1. ಒಂದು ಬದಿ ಸೌಪರ್ಣಿಕಾ ನದಿ, ಇನ್ನೊಂದೆಡೆ ಭೋರ್ಗರೆಯುವ ಸಮುದ್ರ, ಇದರ ನಡುವೆ ಹೆದ್ದಾರಿ. ರಸ್ತೆಯಲ್ಲಿ ಪ್ರಯಾಣಿಸುವಾಗ ಎರಡೂ ಬದಿ ಕಣ್ಣಿಗೆ ಹಬ್ಬವನ್ನುಂಟುಮಾಡುವ ಜಾಗ ಮರವಂತೆ ಕಡಲ ತೀರ.
    2. ಕರ್ನಾಟಕದ ಏಕೈಕ ಶಿಲಾಸ್ತಂಭಗಳ ದ್ವೀಪ, ಮಡಗಾಂಸ್ಕರ್ ಬಿಟ್ಟರೆ ವಿಶ್ವದಲ್ಲಿ ಎರಡನೇ ಪ್ರಕೃತಿ ನಿರ್ಮಿತ ಅದ್ಭುತ ದ್ವೀಪ ಸೈಂಟ್ ಮೆರೀಸ್.
    3. 40ಅಡಿ ಪೀಠದ ಮೇಲೆ ನಿಂತಿರುವ 32 ಅಡಿ ಎತ್ತರದ ಮಧ್ವಾಚಾರ್ಯರ ಏಕಶಿಲೆಯ ಪ್ರತಿಮೆ ಉಡುಪಿಯ ಮತ್ತೊಂದು ಆಕರ್ಷಣೆ.
    4. ಕ್ರೈಸ್ತರು ಮಾತ್ರವಲ್ಲ, ಹಿಂದೂ, ಮುಸ್ಲಿಮರು ಭಕ್ತಿಯಿಂದ ನಡೆದುಕೊಳ್ಳುವ ಅತಿ ಸುಂದರ ಕ್ರೈಸ್ತ ವಾಸ್ತುಶಿಲ್ಪದ ಚರ್ಚ್ ಕಾರ್ಕಳ ಅತ್ತೂರಿನ ಬೆಸಿಲಿಕಾ ಚರ್ಚ್.

    ಈಗಾಗಲೇ https://www.7wondersofkarnataka.com ನಲ್ಲಿ ನಾಮನಿರ್ದೇಶನಗೊಂಡಿರುವ ನೂರು ಅದ್ಭುತಗಳ ಸಾಲಿನಲ್ಲಿ ನಿಂತಿರುವ ಈ ನಾಲ್ಕು ಸ್ಥಳಗಳ ಪೈಕಿ ಉಡುಪಿಯ ನಿಮ್ಮ ಆಯ್ಕೆಯ ಸ್ಥಳಕ್ಕೆ ತಲಾ 10 ವೋಟ್ ಮಾಡಿ ಇವನ್ನು ರಾಜ್ಯದ ಏಳು ಅದ್ಭುತಗಳನ್ನಾಗಿಸಬಹುದು.

    ಪ್ರಸ್ತುತ 100 ಅದ್ಭುತಗಳ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಅತಿ ಹೆಚ್ಚು ವೋಟ್ ಪಡೆದ ಸ್ಥಳಗಳು ಮುಂದಿನ ಹಂತದಲ್ಲಿ ಅಂತಿಮ 49ರ ಪಟ್ಟಿಗೆ ಬರಲಿವೆ. ತದನಂತರ ಅಂತಿಮ 21ರ ಪಟ್ಟಿಯಲ್ಲಿ ಉಳಿದು ಬಳಿಕ ಪ್ರವಾಸೋದ್ಯಮ ಇಲಾಖೆ ತಜ್ಞರ ಸಮಿತಿಯ ಆಯ್ಕೆಯಂತೆ ಕರ್ನಾಟಕದ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸಬಹುದು. ಹೀಗಾಗಿ ಉಡುಪಿ ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಪಾಲಿನ ಹತ್ತು ವೋಟ್‌ಗಳನ್ನು ತಮ್ಮ ನೆಚ್ಚಿನ ಸ್ಥಳಕ್ಕೆ ನೀಡಬಹುದು. ಜತೆಗೆ ಸ್ನೇಹಿತರು, ಕುಟುಂಬ ಸದಸ್ಯರೂ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬಹುದು.

    ಏನಿದು ಅಭಿಯಾನ?:
    ಪ್ರಪಂಚದ ಏಳು ಅದ್ಭುತಗಳನ್ನು ಎಂದೋ ಹುಡುಕಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ‘ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್’ ಸಂಸ್ಥೆಯು ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.
    ‘ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು’ ಎಂದೇ ಪ್ರಸಿದ್ಧಿ. ಇಂತಹ ಕರ್ನಾಟಕದ ಸುಂದರ ಕರಾವಳಿತೀರ, ದುರ್ಗಮ ಕಾನನಗಳು, ರಮಣೀಯ ಜಲಪಾತಗಳು, ಸಮುದ್ರ ತೀರಗಳು, ಐತಿಹಾಸಿಕ ಸ್ಥಳಗಳನ್ನು ಇಂತಹ ಹಲವು ಜಗತ್ತುಗಳನ್ನು ಒಳಗೊಂಡಿದೆ. ಈ ಪೈಕಿ ಏಳು ಅದ್ಭುತಗಳನ್ನು ಸಾರ್ವಜನಿಕರೇ ಗುರುತಿಸಲು ರೂಪಿಸಿರುವ ವೇದಿಕೆಯೇ ‘ಬನ್ನಿ ಹುಡುಕೋಣ ಕರ್ನಾಟಕದ ಏಳು ಅದ್ಭುತಗಳನ್ನು’ ಎಂಬ ಈ ಅಭಿಯಾನ.

    Click here

    Click here

    Click here

    Call us

    Call us

    ಯಾವ ಹಂತದಲ್ಲಿದೆ ಅಭಿಯಾನ?:
    ಮೇ ತಿಂಗಳಲ್ಲಿ ಚಾಲನೆ ದೊರೆತಿರುವ ಆರು ಹಂತದ ಈ ಅಭಿಯಾನ ಎರಡನೇ ಹಂತಕ್ಕೆ ತಲುಪಿದೆ. ಮೊದಲ ಹಂತದಲ್ಲಿ ಸಾರ್ವಜನಿಕರು ವೆಬ್‌ಸೈಟ್ ಮೂಲಕ ತಮ್ಮ ನೆಚ್ಚಿನ ಊರು, ಜಿಲ್ಲೆ, ತಾಲೂಕು ಸೇರಿ ರಾಜ್ಯದ ಯಾವುದೇ ಜಾಗದಲ್ಲಿ ತಾವು ನೋಡಿದ ಅದ್ಭುತ ಪ್ರವಾಸಿ ಸ್ಥಳ, ಪಾರಂಪರಿಕ ತಾಣ, ಅತ್ಯಾಧುನಿಕ ಕಟ್ಟಡ, ರಸ್ತೆ ಹೀಗೆ ಅದ್ಭುತ ಎನಿಸುವ ಸ್ಥಳದ ಫೋಟೊ ಅಪ್‌ಲೋಡ್ ಮಾಡಿ ಆ ಸ್ಥಳದ ವೈಶಿಷ್ಟ್ಯವನ್ನು ದಾಖಲು ಮಾಡಿ ನಾಮನಿರ್ದೇಶನ ಮಾಡಿದ್ದಾರೆ.
    ಇದೀಗ, ಎರಡನೇ ಹಂತದಲ್ಲಿ ಸಾರ್ವಜನಿಕರಿಂದ ನಾಮನಿರ್ದೇಶನಗೊಂಡ ಅದ್ಭುತಗಳಲ್ಲಿ 100 ಸ್ಥಳಗಳನ್ನು ಆಯ್ಕೆ ಮಾಡಿ, ಅತ್ಯದ್ಭುತ ತಾಣಗಳು ಯಾವುವು ಎಂಬ ಬಗ್ಗೆ ವೋಟಿಂಗ್‌ ನಡೆಯುತ್ತಿದೆ.

    ವೋಟಿಂಗ್ ನಿಯಮ:

    • ಆಯ್ಕೆಯಾಗಿರುವ ನೂರು ಅದ್ಭುತಗಳಿಗೂ ವೋಟ್ ಹಾಕಬಹುದು.
    • ಪ್ರತಿಯೊಂದು ಅದ್ಭುತಕ್ಕೂ ಹತ್ತು ವೋಟ್ ಮಾಡಲು ಅವಕಾಶವಿರುತ್ತದೆ.
    • ಈ ಮೆಗಾ ಅಭಿಯಾನದ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದವರಿಗೂ ತಿಳಿಸಿ. ತನ್ಮೂಲಕ ನಿಮ್ಮ ಜಿಲ್ಲೆಯ ಸ್ಥಳವನ್ನು ಅದ್ಭುತವನ್ನಾಗಿಸಿ.
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.