ರತ್ತೂಬಾಯಿ ಜನತಾ ಪ್ರೌಢಶಾಲೆ: ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಪ್ರತಿಭೆಗಳಿಗೆ ಸರಿಯಾದ ಸಮಯದಲ್ಲಿ ಪ್ರೋತ್ಸಾಹ ದೊರೆತಾಗ ಅವರು ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ. ಶಿಕ್ಷಣ ಇಲಾಖೆಯ ಮೂಲಕ ನಡೆಯುವ ಸ್ವರ್ಧೆಯಲ್ಲಿ ಭಾಗವಹಿಸುವ ಎಷ್ಟೋ ವಿದ್ಯಾರ್ಥಿಗಳು ಮುಂದೆ ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಿದ ಉದಾಹರಣೆಗಳಿವೆ ಎಂದು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಹೇಳಿದರು.

Call us

Click Here

ಅವರು ಸೋಮವಾರ ರತ್ತೂಬಾಯಿ ಜನತಾ ಪ್ರೌಢಶಾಲೆಯ ಸಹಯೋಗದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆಯೋಜಿಸಿದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ 2022 ಪಂದ್ಯಾಟ ಉದ್ಘಾಟಿಸಿ ಕ್ರಿಡಾಪಟುಗಳಿಗೆ ಶುಭಹಾರೈಸಿದರು.

ಶ್ರೀ ವಿ.ವಿ.ವಿ. ಮಂಡಳಿ ಉಪಾಧ್ಯಕ್ಷರಾದ ಎಸ್. ರಾಜು ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಡಯಟ್ ಪ್ರಾಂಶುಪಾಲರಾದ ಗೋವಿಂದ ಮಡಿವಾಳ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್, ಬೈಂದೂರು ಸೈಂಟ್ ಥಾಮಸ್ ಶಾಲೆಯ ಪ್ರಾಂಶುಪಾಲರಾದ ಜಾನ್ ನೆಲಿವಿಲ್ಲಾ, ಶ್ರೀ ವಿ.ವಿ.ವಿ. ಮಂಡಳಿ ನಿರ್ದೇಶಕರಾದ ಕೆ. ರಘುರಾಮ ಪೂಜಾರಿ, ರಾಜ್ಯ ದೈ.ಶಿ.ಶಿ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ಸಚಿನ್ ಕುಮಾರ್ ಶೆಟ್ಟಿ, ಗ್ರೇಡ್ 1 ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಜಿ., ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಬೈಂದೂರು ತಾಲೂಕು ದೈ.ಶಿ.ಶಿ ಸಂಘದ ಅಧ್ಯಕ್ಷ ಪ್ರವೀಣ ಕುಮಾರ್ ಶೆಟ್ಟಿ ಕಾರ್ಯದರ್ಶಿ ಸತೀಶ್ ಖಾರ್ವಿ, ಯಡ್ತರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಪೂಜಾರಿ, ಮಾಜಿ ಸದಸ್ಯ ನಾಗರಾಜ ಗಾಣಿಗ ಬಂಕೇಶ್ವರ, ಬೈಂದೂರು ತಾಲೂಕು ಯುವಜನ ಸೇವಾ ಹಾಗೂ ಕ್ರೀಡಾ ಇಲಾಖಾ ಅಧಿಕಾರಿ ಪ್ರಭಾಕರ ಎಸ್., ಪೋಷಕ ಪ್ರತಿನಿಧಿ ರವೀಂದ್ರ ಶ್ಯಾನುಭೋಗ್, ಮುಖ್ಯೋಪಾಧ್ಯಾಯರಾದ ಮಂಜು ಕಾಳವಾರ ಉಪಸ್ಥಿತರಿದ್ದರು.

ಈ ಸಂದರ್ಭ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರತ್ತೂಬಾಯಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಸ್ವಾಗತಿಸಿದರು. ಚಂದ್ರ ದೇವಾಡಿಗ ವಂದಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗುರುರಾಜ ಎಸ್. ಕಾರ್ಯಕ್ರಮ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply