ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲಿ ಸರ್ವೇಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಡೆಯಿತು.
ಕಾಲೇಜ್ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರೌಢಶಾಲೆ ಸಿದ್ಧಾಪುರ ಸಹಶಿಕ್ಷಕಿ ವಸಂತಿ ಭಟ್ಮನಕ್ಕಿ ಶಿಕ್ಷಣ-ವಿದ್ಯಾರ್ಥಿ ಕುರಿತು ಮಾತನಾಡಿದರು.
ಪ್ರಗತಿ ಮಹಿಳಾ ವಿವಿಧೋದ್ದೇಶ ಕೋ-ಆಪರೇಟಿವ್ ಸೊಸೈಟಿ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಅಭಿಜಿತ್ ಅತಿಥಿಗಳ ಪರಿಚಯಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಶ್ರೀಹರ್ಷ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಉದಯಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಆಂಗ್ಲ ಭಾಷಾ ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು.