ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರು ಕುಲಶೇಖರದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಒಕ್ಕೂಟದ ನಿರ್ದೇಶಕರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಶ್ರೇಷ್ಠ ಹೈನುಗಾರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಕೃಷಿ ಹಾಗೂ ಹೈನುಗಾರಿಕೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ತೊಡಗಿಸಿಕೊಂಡಿದ್ದಾರೆ.
ದ.ಕ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ನಿರ್ದೇಶಕರುಗಳು ಉಪಸ್ಥಿತರಿದ್ದರು.