ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.09: ಹೆರಿಕುದ್ರು ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಸಾಯೀಶ್ ಶೆಟ್ಟಿ (17) ಮೃತದೇಹ ಶುಕ್ರವಾರ ಬೆಳಿಗ್ಗೆ ನಾವುಂದ ಪೆಟ್ರೋಲ್ ಬಂಕ್ ಹಿಂಭಾಗ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದಕ್ಕೆ ಮನನೊಂದು ವಿದ್ಯಾರ್ಥಿ, ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ ರಸ್ತೆ ನಿವಾಸಿ ರಘುವೀರ್ ಶೆಟ್ಟಿ ಎಂಬುವರ ಮಗ ಸಾಯೀಶ್ ಶೆಟ್ಟಿ ಗುರುವಾರ ಮಧ್ಯಾಹ್ನ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ.
ಸಂಜೆಯ ತನಕವೂ ಮುಳುಗು ತಜ್ಞರು ಹಾಗೂ ಸ್ಥಳೀಯರು ವಿದ್ಯಾರ್ಥಿಯ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದರೂ ನೀರಿನ ಹರಿವು ಹೆಚ್ಚಿದ್ದರಿಂದ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಇಂದು ಸುಮಾರು 22 ಕಿ.ಮೀ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಸಮುದ್ರ ತೀರದಲ್ಲಿದ್ದ ಮೃತದೇಹವನ್ನು ಸ್ಥಳೀಯ ಯುವಕರು ತಕ್ಷಣ ಪತ್ತೆಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.
ಇದನ್ನೂ ಓದಿ:
► ನೀಟ್‌ನಲ್ಲಿ ಕಡಿಮೆ ಅಂಕ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ – https://kundapraa.com/?p=61968 .
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಒತ್ತಡ, ಸಮಸ್ಯೆಗಳಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಅಥವಾ ಆಪ್ತಸಮಾಲೋಚಕರನ್ನು ಸಂಪರ್ಕಿಸಿ



















